
ಬೆಳ್ತಂಗಡಿ:ಹಟ್ಟಿಗೆ ನುಗ್ಗಿದ ಚಿರತೆ ಕರುವನ್ನು ಕೊಂದು ಹಾಕಿದ ಘಟನೆ
ಮರೋಡಿ ಗ್ರಾಪಂ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ. ಪೆರಾಡಿಯ ಬೈಲೋಡಿ ಆನಂದ ಶೆಟ್ಟಿಯವರ ಹಟ್ಟಿಯಲ್ಲಿದ್ದ ಕರುವಿನ ಮೇಲೆ ದಾಳಿ ಮಾಡಿದ ಚಿರತೆ ಕರುವನ್ನು ಎಳೆದೊಯ್ದು ಕೊಂದು ಹಾಕಿದೆ.
ಘಟನೆಯ ವಿಚಾರ ತಿಳಿದ ವೇಣೂರು ಅರಣ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಕರುವಿನ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.