ಬೆಳ್ತಂಗಡಿ; ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಗೆ ತಿದ್ದುಪಡಿ ತಂದು ಗ್ರಾಮೀಣ ಜನರಿಗೆ ಮಾಡಿರುವ ಮೋಸದ ವಿರುದ್ಧ ಮುಂಬರುವ ದಿನಗಳಲ್ಲಿ ನಡೆಸಲಾಗುವ ಹೋರಾಟದ ರೂಪರೇಷೆ, ಗ್ರಾಮದಲ್ಲಿ ಆಗಬೇಕಾಗಿದ್ದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಮಗ್ರ ಚರ್ಚೆ ನಡೆಸುವ ಸಲುವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಇತ್ತೀಚೆಗೆ
ಇಳಂತಿಲದ ಏಚ್ ಎಂ ಸಭಾಭವನದಲ್ಲಿ ನಡೆಯಿತು.
ಈ ಸಭೆಯಲ್ಲಿ ಎಂ ಎನ್ ಆರ್ ಈ ಜಿ ಬಚಾವ್ ಆಂದೋಲನದ ಬಗ್ಗೆ ಜಾಗೃತಿ ಮೂಡಿಸಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ರಕ್ಷಿತ್ ಶಿವರಾಮ್ ರವರು ವಿರೋಧ ಪಕ್ಷದ ನಾಯಕರು ದಿನಂಪ್ರತಿ ಒಂದಲ್ಲ ಒಂದು ವಿಚಾರಗಳನ್ನು ಎತ್ತಿಕೊಂಡು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸುತ್ತಿದ್ದು ಅದನ್ನು ದಿಟ್ಟವಾಗಿ ಎದುರಿಸುವ ಎದೆಗಾರಿಕೆಯನ್ನು ನಾವು ಹೊಂದಬೇಕಾಗಿದ್ದು ಕರ್ನಾಟಕ ಸರ್ಕಾರದ ಜನಪರ ಯೋಜನೆಗಳನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೆ ತಲುಪಿಸುವಲ್ಲಿ ಕಾರ್ಯಕರ್ತರು ಪ್ರಯತ್ನಿಸಬೇಕು ಎಂದು ಕರೆ ನೀಡಿದರು.
ಈ ಸಭೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ ಕೆ ಶಾಹುಲ್ ಹಮೀದ್, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್, ಜಿಲ್ಲಾ ಕಿಸಾನ್ ಘಟಕದ ಅಧ್ಯಕ್ಷರಾದ ಮೋಹನ್ ಗೌಡ ಕಲ್ಮಂಜ, ಪ್ರಮುಖರಾದ ಜಯವಿಕ್ರಮ ಕಲ್ಲಾಪು, ಅಯೂಬ್ ಡಿ ಕೆ, ಕೃಷ್ಣ ಭಟ್, ಮುಡಾಜೆ, ಇಳಂತಿಲ ಗ್ರಾಮ ಸಮಿತಿಯ ಅಧ್ಯಕ್ಷರಾದ ಯು ಕೆ ಇಸುಬು ಇಳಂತಿಲ ಮುಂತಾದ ನಾಯಕರು ಉಪಸ್ಥಿತರಿದ್ದರು.











