ಬೆಳ್ತಂಗಡಿ: ನಡ ಗ್ರಾಮಪಂಚಾಯತು ವ್ಯಾಪ್ತಿಯ ಕನ್ಯಾಡಿ ಗ್ರಾಮದ ನಿವಾಸಿಯೊಬ್ಬರು ವಿದ್ಯುತ್ ಆಘಾತಕ್ಕೆ ಬಲಿಯಾದ ಘಟನೆ ಭಾನುವಾರ ಮುಂಜಾನೆ ಸಂಭವಿಸಿದೆ.
ಮೃತವ್ಯಕ್ತಿ ಕನ್ಯಾಡಿ ಬಯಲು ಕಡ್ತ್ಯಾರು ನಿವಾಸಿ ಶಿವಪ್ರಸಾದ್ ಅಡಪ(48) ಎಂಬವರಾಗಿದ್ದಾರೆ.
ಇವರು ಇಂದು ಮುಂಜಾನೆ ತೋಟದ ಪಂಪ್ ಷೆಡ್ ನಲ್ಲಿ ಪಂಪ್ ಸ್ವಿಚ್ ಹಾಕುವ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ಅವರನ್ನು ಕೂಡಲೆ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯುವ ವೇಳೆ ಮೃತಪಟ್ಟಿದ್ದಾರೆ.
ಮೃತರು ತಾಯಿ ಪತ್ನಿ ಮಕ್ಕಳು, ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
