Home ರಾಜಕೀಯ ಸಮಾಚಾರ ಇದೇ ವರ್ಷ ಗ್ರಾ ಪಂ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಚಿವ ದಿನೇಶ್ ಗುಂಡೂರಾವ್

ಇದೇ ವರ್ಷ ಗ್ರಾ ಪಂ ಸೇರಿದಂತೆ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಚಿವ ದಿನೇಶ್ ಗುಂಡೂರಾವ್

0

ಬೆಳ್ತಂಗಡಿ: ಇದೇವರ್ಷ ರಾಜ್ಯದಲ್ಲಿ ಗ್ರಾಮಪಂಚಾಯತುಗಳಿಗೆ ತಾಲೂಕು,ಜಿಲ್ಲಾ ಪಂಚಾಯತು ಹಾಗೂ ಬೆಂಗಳೂರು ಸೇರಿದಂತೆ ನಗರಪಾಲಿಕೆಗಳಿಗೆ ಚುನಾವಣೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿಬೇಶ್ ಗುಂಡೂರಾವ್ ಹೇಳಿದರು
ಅವರು ಕುಕ್ಕೇಡಿಯಲ್ಲಿ ಅಂಬೇಡ್ಕರ್ ಭವನ ಉದ್ಘಾಟನಾ ಸಮಾರಂಭದ ಬಳಿಕ ಮಾಧ್ಯಮ ದವರೊಂದಿಗೆ ಮಾತನಾಡಿದರು.
ಗ್ರಾಮಪಂಚಾಯತು ಚುನಾವಣೆಗಳನ್ನು ಮೊದಲು ನಡೆಸಿ ಬಳಿಕ ಇತರ ಚುನಾವಣೆಗಳನ್ನು ನಡೆಸುವ ಸಾಧ್ಯತೆಯಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ತಾಲೂಕು ಕೇಂದ್ರವಾದ ಬೆಳ್ತಂಗಡಿಗೆ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮೂರು ಕೋಟಿ ಅನುದಾನ ಈಗಾಗಲೇ ಮಂಜೂರಾಗಿದೆ ಆದರೆ ಕಾಮಗಾರಿ ಇನ್ನೂ ಆರಂಭವಾಗಿಲ್ಲ ಶಾಸಕರು ಬೇರೆಯೇ ಆಲೋಚನೆಯನ್ನು ಹೇಳುತ್ತಿದ್ದಾರೆ ಇದರಿಂದಾಗಿ ಅಂಬೇಡ್ಕರ್ ಭವನ ನಿರ್ಮಾಣ ಕಾರ್ಯಕ್ಕೆ ತಡೆಯಾಗಿದೆ ಈ ಬಗ್ಗೆ ಶಾಸಕರೊಂದಿಗೆ ಮಾತುಕತೆ ನಡೆಸಿ ಕೂಡಲೇ ಅಂಬೇಡ್ಕರ್ ಭವನದ ನಿರ್ಮಾಣ ಕಾಮಗಾರಿ ಆರಂಭಿಸುವ ಕಾರ್ಯ ಮಾಡುವುದಾಗಿ ಅವರು ತಿಳಿಸಿದರು.
ಬೆಳ್ತಂಗಡಿ ತಾಲೂಕಿನಲ್ಲಿ ಚಿರತೆ ಹಾವಳಿ ತೀವ್ರಗೊಂಡಿರುವುದು ಗಮನಕ್ಕೆ ಬಂದಿದೆ ಎಂದ ಅವರು ಅರಣ್ಯ ಇಲಾಖೆಯವರು ಅಗತ್ಯ ಕ್ರಮ ಕೈಗೊಳ್ಳುತ್ತಿದ್ದಾರೆ. ಈ ಬಗ್ಗೆ ಅರಣ್ಯ ಸಚಿವರೊಂದಿಗೂ ಚರ್ಚೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಡಿಸಿಮನ್ನಾ ಜಮೀನು ಹಂಚಿಕೆಯ ಬಗ್ಗೆ ಚರ್ಚೆಗಳು ನಡೆದಿದೆ ಲಭ್ಯ ಭೂಮಿ ಕಡಿಮೆಯಾಗಿದ್ದು ಈ ಬಗ್ಗೆ ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಕಳಿಯದಲ್ಲಿ ನಡೆದ ಸುಮಂತ್ ಕೊಲೆ ಪ್ರಕರಣದಲ್ಲಿ ಪೊಲೀಸರು ಎಲ್ಲ ರೀತಿಯ ತನಿಖೆ ನಡೆಸುತ್ತಿದ್ದಾರೆ ಈವರೆಗೂ ಆರೋಪಿಗಳ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ ಎಂದು ತಿಳಿದು ಬಂದಿದೆ.ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರೊಂದಿಗೆ ಮಾತುಕತೆ ನಡೆಸುವುದಾಗಿ ತಿಳಿಸಿದ ಅವರು ಅಪರಾಧಿಗಳನ್ನು ಪತ್ತೆಹಚ್ಚುವ ವಿಶ್ವಾಸ ವ್ಯಕ್ತಪಡಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version