Home ಅಪರಾಧ ಲೋಕ ಪುತ್ತೂರು ಮಾದಕವಸ್ತು ಮಾರಾಟಯತ್ನ ತಂಡದ ನಾಲ್ವರ ಬಂಧನ

ಪುತ್ತೂರು ಮಾದಕವಸ್ತು ಮಾರಾಟಯತ್ನ ತಂಡದ ನಾಲ್ವರ ಬಂಧನ

3
0

ಬೆಳ್ತಂಗಡಿ: ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪತ್ತೆ ಮಾಡಿ, ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಹರ್ಷದ್ (33), ಪುತ್ತೂರು, ಮಹಮ್ಮದ್ ಆರೀಶ್ (31), ಪುತ್ತೂರು, ಇಬ್ರಾಹಿಂ ಅಶ್ರಫ್ ಅಲಿಯಾಸ್ ರೋಜಾ ಅಶ್ರಫ್ (46), ಪುತ್ತೂರು ಹಾಗೂ ಆರೋಪಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ನೀಡುತ್ತಿದ್ದ ಬಂಟ್ವಾಳ ನಿವಾಸಿ ಮುಸ್ತಾಫ (46) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಿಂದ ಅಂದಾಜು ರೂ. 50,000/- ಮೌಲ್ಯದ 6.39 , 0.87 , ಮೊಬೈಲ್ ಫೋನ್ ಗಳು ಹಾಗೂ ಕೃತ್ಯಕ್ಕೆ ಬಳಸಿದ ಅಂದಾಜು ರೂ ಆರು ಲಕ್ಷ ಮೌಲ್ಯದ 02 ಕಾರುಗಳನ್ನು ಹಾಗೂ ಇತರೆ ಸೊತ್ತುಗಳನ್ನು ವಶಕ್ಕೆ ಪಡೆದಿರುತ್ತಾರೆ.ಮಂಗಳೂರು ವಶಪಡಿಸಿಕೊಂಡ ಒಟ್ಟು ಸೊತ್ತುಗಳ ಅಂದಾಜು ಮೌಲ್ಯ
6,50,000/-ರೂ ಗಳಾಗಿದ್ದು, ಈ ಬಗ್ಗೆ ಪುತ್ತೂರು
ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ 8(c)21(b) NDPS Act. 25(1B)(B) Arms Act d ಪ್ರಕರಣ ದಾಖಲಾಗಿರುತ್ತದೆ.
ಸದ್ರಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಗುಣಾಪಾಲ ಜೆ ರವರು ನೇತೃತ್ವದ ತನಿಖಾ ತಂಡದಲ್ಲಿ ಪುತ್ತೂರು ಗ್ರಾಮಾಂತರ ಠಾಣಾ ಉಪ ನಿರೀಕ್ಷಕರಾದ ಸುಷ್ಮಾ ಭಂಡಾರಿ ಹಾಗೂ ಸಿಬ್ಬಂಧಿಗಳಾದ ಮುರುಗೇಶ್ ಪರಮೇಶ್ವರ, ಸತೀಶ್, ಸುಬ್ರಹ್ಮಣ್ಯ, ಹರೀಶ್, ನಾಗೇಶ್, ಭವಿತ್ ರೈ ವಿನೋದ್, ನಾಗರಾಜ್, ಕಾರ್ತಿಕ್ ಹಾಗೂ ವಿಶೇಷ ತಂಡದ ಸಿಬ್ಬಂದಿಗಳಾದ ಅದ್ರಾಮ್, ಪ್ರಶಾಂತ ಎಂ, ಪ್ರವೀಣ್ ರೈ, ಪ್ರಶಾಂತ್ ರೈ, ಹರ್ಷಿತ್, ಸಂಪತ್ ಹಾಗೂ ಸೋಕೋ ತಂಡದವರು ಭಾಗವಹಿಸಿರುತ್ತಾರೆ.

LEAVE A REPLY

Please enter your comment!
Please enter your name here