
ಮುಂಬಯಿ: ಮಹಾರಾಷ್ಟ್ರ ಡಿಸಿಎಂ, ಎನ್ ಸಿಪಿ ನಾಯಕ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ಬುಧವಾರ ಬೆಳಗ್ಗೆ ಲ್ಯಾಂಡಿಂಗ್ ವೇಳೆ ಪತನಗೊಂಡಿದೆ.
ಅಪಘಾತದಲ್ಲಿ 66 ವರ್ಷದ ನಾಯಕ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಅಪಘಾತಕ್ಕೆ ಕಾರಣ, ಹಾನಿಯ ಪ್ರಮಾಣ ಮತ್ತು ಎನ್‌ಸಿಪಿ ಮುಖ್ಯಸ್ಥರ ಸ್ಥಿತಿ ಕುರಿತು ಇನ್ನೂ ತಿಳಿದುಬಂದಿಲ್ಲ.ಬೆಂಕಿ ಹೊತ್ತಿಕೊಂಡಿರುವ ದೃಶ್ಯಗಳು ಲಭ್ಯವಾಗಿದ್ದು ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.









