Home ರಾಜಕೀಯ ಸಮಾಚಾರ ಬೆಳ್ತಂಗಡಿ; ಫೆಬ್ರವರಿ 02 ರಂದು ಬ್ಲಾಕ್ ಕಾಂಗ್ರೆಸ್ ವತಿಯಿಂದ ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನ...

ಬೆಳ್ತಂಗಡಿ; ಫೆಬ್ರವರಿ 02 ರಂದು ಬ್ಲಾಕ್ ಕಾಂಗ್ರೆಸ್ ವತಿಯಿಂದ ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಭಾಗಿ

0
2

ಬೆಳ್ತಂಗಡಿ; ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಚಾವ್‌ ಆಂದೋಲನವು, ದಿನಾಂಕ 02:02 2026ನೇ ಸೋಮವಾರ ಬೆಳ್ತಂಗಡಿಯಲ್ಲಿ ನಡೆಯಲಿದ್ದು. ಸಮಾವೇಶದಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರು, ಪರಿಶ್ರಮ ನೀಟ್ ಅಕಾಡೆಮಿಯ ಸಂಸ್ಥಾಪಕರು. ಪ್ರದೀಪ್ ಈಶ್ವರ್ ಮಾತನಾಡಲಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರುಗಳಾದ ಸತೀಶ್ ಕಾಶಿಪಟ್ಣ ಹಾಗೂ ನಾಗೇಶ್ ಕುಮಾರ್ ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.
ಆ ದಿನ ಬೆಳಿಗ್ಗೆ 10:00 ಗಂಟೆಗೆ ಲಾಯಿಲ ಸಂಗಮ ಸಭಾಭವನದ ಬಳಿಯಿಂದ ಬೆಳ್ತಂಗಡಿ ಮಂಜುನಾಥ ಸ್ವಾಮಿ ಕಲಾಭವನದವರೆಗೆ ಕಾಲ್ನಡಿಗೆ ಜಾಥ ನಡೆಯಲಿದೆ. ನಂತರ ಬಹಿರಂಗ ಸಭೆಯನ್ನು ಉದ್ದೇಶಿಸಿ
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕರು, ಪರಿಶ್ರಮ ನೀಟ್ ಅಕಾಡೆಮಿಯ ಸಂಸ್ಥಾಪಕರು. ಪ್ರದೀಪ್ ಈಶ್ವರ್ ಮಾತನಾಡಲಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಹಾಗೂ ಪ್ರಮುಖರು ಭಾಗವಹಿಸಲಿದ್ದಾರೆ. ಎಂದು ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ನ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ, ಬೆಳ್ತಂಗಡಿ ಅಧ್ಯಕ್ಷ
ನಾಗೇಶ್ ಕುಮಾರ್ ಗೌಡ ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here