
ಬೆಳ್ತಂಗಡಿ:
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ 14 ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ತುರ್ತು ದುರಸ್ತಿ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಒಟ್ಟು ರೂ.57.93 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿದೆ ಎಂದು ಶಾಸಕ ಹರೀಶ್ ಪೂಂಜ ಮಾಹಿತಿ ನೀಡಿದ್ದಾರೆ.
ಈ ಅನುದಾನದಿಂದ ಶಾಲೆಗಳ ಮೂಲಭೂತ ಸೌಕರ್ಯಗಳು ಮತ್ತಷ್ಟು ಸುಧಾರಣೆಯಾಗಲಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ಹಾಗೂ ಸುರಕ್ಷಿತ ಶಿಕ್ಷಣ ವಾತಾವರಣ ಕಲ್ಪಿಸಲು ಸಹಕಾರಿಯಾಗಲಿದೆ
ಶಾಸಕರ ಮನವಿಗೆ ಸ್ಪಂದಿಸಿ ಅನುದಾನ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಹಾಗೂ ಶಿಕ್ಷಣ ಸಚಿವರಿಗೆ ತಾಲೂಕಿನ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಶಾಸಕ ಹರೀಶ್ ಪೂಂಜ ಅವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.