Home ಅಪರಾಧ ಲೋಕ ಧರ್ಮಸ್ಥಳ ಪಾಂಗಳದಲ್ಲಿ ಹಗಲು ಹೊತ್ತಿನಲ್ಲಿ ಮನೆಗೆ ನುಗ್ಗಿ  ಚಿನ್ನಾಭರಣ ನಗದು ಕಳ್ಳತನ

ಧರ್ಮಸ್ಥಳ ಪಾಂಗಳದಲ್ಲಿ ಹಗಲು ಹೊತ್ತಿನಲ್ಲಿ ಮನೆಗೆ ನುಗ್ಗಿ  ಚಿನ್ನಾಭರಣ ನಗದು ಕಳ್ಳತನ

0

ಬೆಳ್ತಂಗಡಿ : ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯೊಳಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳ್ಳತನ ಮಾಡಿಕೊಂಡ ಹೋದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳದ ಲಕ್ಷ್ಮೀ ನಿವಾಸದ ಬಾಲಕೃಷ್ಣ ಗೌಡರ ಮನೆಗೆ ಜ.29 ರಂದು ಬೆಳಗ್ಗೆ 9:30 ರಿಂದ ಸಂಜೆ 4 ಗಂಟೆ ಒಳಗಡೆ ಮನೆಯಲ್ಲಿ ಯಾರು ಇಲ್ಲದ ವೇಳೆಗೆ ಕಳ್ಳತನ ನಡೆದಿದೆ.

ಸಂಜೆ ವೇಳೆಗೆ ಕೆಲಸದಿಂದ ಮನೆಗೆ ಬಂದಾಗ ಕಳ್ಳತನ ಬೆಳಕಿಗೆ ಬಂದಿದ್ದು‌, ಮನೆಯೊಳಗಿದ್ದ 40 ಸಾವಿರ ಮೌಲ್ಯದ 4 ಗ್ರಾಂ ಕಿವಿಓಲೆ,2 ಸಾವಿರ ಮೌಲ್ಯದ 2 ಜೊತೆ ಬೆಳ್ಳಿಯ ಕಾಲುಗೆಜ್ಜೆ,5,500 ರೂಪಾಯಿ ನಗದು ಸೇರಿ ಒಟ್ಟು 47,500 ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಬಗ್ಗೆ ಮನೆ ಮಾಲೀಕ ಬಾಲಕೃಷ್ಣ ಗೌಡ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿಎಸ್ , ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ಮತ್ತು ತಂಡ, ಮಂಗಳೂರು ಬೆರಳಚ್ಚು ತಜ್ಞರು, ಪುತ್ತೂರು ಸೊಕೋ ತಂಡ, ಮಂಗಳೂರು ಶ್ವಾನ ದಳ ಬಂದು ಪರಿಶೀಲನೆ ನಡೆಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version