Home ಅಪಘಾತ ಉಜಿರೆ: ಕಾಮಗಾರಿ ವೇಳೆ ತಡೆಗೋಡೆ ಕುಸಿದು ಕಾರ್ಮಿಕ ಸಾವು

ಉಜಿರೆ: ಕಾಮಗಾರಿ ವೇಳೆ ತಡೆಗೋಡೆ ಕುಸಿದು ಕಾರ್ಮಿಕ ಸಾವು

0

ಬೆಳ್ತಂಗಡಿ : ಉಜಿರೆಯಿಂದ ಸುರ್ಯ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿದ್ದವೇಳೆ ತಡೆಗೋಡೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಕಾರ್ಮಿಕರೊರ್ವ ಮೃತಪಟ್ಟ ಘಟನೆ ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ – ಸುರ್ಯ ರಸ್ತೆಯಲ್ಲಿ ಜ.31 ರಂದು ಬೆಳಗ್ಗೆ ನಿರ್ಮಾಣ ಹಂತದಲ್ಲಿದ್ದ ತಡೆಗೋಡೆ ಕುಸಿದು ಬಿದ್ದಿದೆ. ಬಿಹಾರ ಮೂಲದ ರಾಕೇಶ್ ಕುಮಾರ್(25) ಎಂಬಾತ ಮಣ್ಣಿನಡಿಯಲ್ಲಿ ಸಿಲುಕಿದ್ದು ಕೂಡಲೇ ಸ್ಥಳೀಯರು ರಕ್ಷಣೆಗೆ ಧಾವಿಸಿ ಆತನನ್ನು ಹೊರತೆಗೆದು ತುರ್ತು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸಾಗಿಸುವ ವೇಳೆಯಲ್ಲಿ ಮೃತಪಟ್ಟಿದ್ದಾರೆ. ಇಬ್ಬರು ಕಾರ್ಮಿಕರು ಸಣ್ಣಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ.ಮೃತದೇಹ ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version