Home ಬ್ರೇಕಿಂಗ್‌ ನ್ಯೂಸ್ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

0

ಬೆಳ್ತಂಗಡಿ; ಉಜಿರೆಯ ಸೌಜನ್ಯ ಪರ ಹೊರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಕಮಿಷನರ್ ಅವರು ನೀಡಿದ್ದ ಆದೇಶಕಗಕೆ ರಾಜ್ಯ ಉಚ್ಚ ನ್ಯಾಯಾಲಯ ತಾತ್ಕಾಲಿಕ ತಡೆ ನೀಡಿರುವುದಾಗಿ ತಿಳಿದು ಬಂದಿದೆ.
ಪುತ್ತೂರು ಸಹಾಯಕ ಕಮಿಷನರ್ ಅವರ ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ ಅವರು ರಾಜ್ಯ ಉಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಆದೇಶಕ್ಕೆ ತಾತ್ಕಲಿಕ ತಡೆಯಾಜ್ಞೆ ನೀಡಿದ್ದು ಸಹಾಯಕ ಕಮಿಷನರ್ ನೀಡಿರುವ ಆದೇಶ ಸಮರ್ಪಕವಾಗಿಲ್ಲ ಎಂದು 21ದಿನದೊಳಗೆ ಪ್ರಕರಣದ‌ ಮರು ವಿಚಾರಣೆ ನಡೆಸಿ ಆದೇಶ ನೀಡುವಂತೆ ನ್ಯಾಯಾಲಯ ಪುತ್ತೂರು ಸಹಾಯಕ ಕಮಿಷನರ್ ಅವರಿಗೆ ಸೂಚಿಸಿರುವುದಾಗಿ ತಿಳಿದು ಬಂದಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version