Home ಅಪರಾಧ ಲೋಕ ಉಪ್ಪಿನಂಗಡಿ ತಡೆಗೋಡೆಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು

ಉಪ್ಪಿನಂಗಡಿ ತಡೆಗೋಡೆಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು

24
0

ಉಪ್ಪಿನಂಗಡಿ; ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಕಾರು ತಡೆಗೋಡೆಗೆ ಗುದ್ದಿ ಹೊತ್ತಿ ಉರಿದ ಘಟನೆ ಸಂಭವಿಸಿದೆ.

30.01.2026 ರಂದು 13.30 ಗಂಟೆಗೆ KA-05-NN-8222 ಕಾರಿನ ಚಾಲಕ ಹರ್ಷಿತ್ ಜಿ (29) ರಾಜಾಜಿನಗರ ಬೆಂಗಳೂರು ಅವರು ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಅಜಾಗರೂಕ ಹಾಗೂ ನಿರ್ಲಕ್ಷ್ಯದಿಂದ ಚಾಲನೆ ಮಾಡಿದ ಪರಿಣಾಮ ಕಾರು ರಸ್ತೆ ಬದಿ ಕಾಂಕ್ರೀಟ್ ತಡೆಗೋಡೆಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಹೋಗಿದ್ದು ಕಾರಿನಲ್ಲಿ ಪ್ರಯಾಣಿಸಿದ್ದವರಿಗೆ ಯಾವುದೇ ಗಾಯಗಳಿಲ್ಲ. ಈ ಬಗ್ಗೆ ಸ್ವಯಂ ದೂರು ದಾಖಲಿಸಿಕೊಂಡು ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ 19/2026 ಕಲಂ: 281 ಬಿ.ಎನ್ ಎಸ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

LEAVE A REPLY

Please enter your comment!
Please enter your name here