Home ಅಪರಾಧ ಲೋಕ ದ್ವೇಷ ಭಾಷಣ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ಮಂಜೂರು

ದ್ವೇಷ ಭಾಷಣ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ಮಂಜೂರು

0

ಬೆಳ್ತಂಗಡಿ; ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಜಾಮೀನುರಹಿತ ವಾರೆಂಟ್ ಜಾರಿಯಾಗಿದ್ದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಜಾಮೀನು ಮಂಜೂರು ಮಾಡಿ ಬಂಟ್ವಾಳ ನ್ಯಾಯಾಲಯ ಆದೇಶ ಹೊರಡಿಸಿದೆ.
ದ್ವೇಷ ಭಾಷಣ ಮಾಡಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸರು ದಾಖಲಿಸಿದ್ದ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ನ್ಯಾಯಾಲಯಕ್ಕೆ ಹಾಜರಾಗದೆ ಇದ್ದ ಹಿನ್ನಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯ ಮಹೇಶ್ ಶೆಟ್ಟಿ ಅವರ ವಿರುದ್ದ ವಾರೆಂಟ್ ಜಾರಿ ಮಾಡಿತ್ತು. ಇದೀಗ ಬಂಟ್ವಾಳ ನ್ಯಾಯಾಲಯದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ಪರವಾಗಿ ನ್ಯಾಯವಾದ ಸಿರಾಜುದ್ದೀನ್ ಜೋಗಿಬೆಟ್ಟು ವಾದ ಮಂಡಿಸಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version