Home ಸ್ಥಳೀಯ ಸಮಾಚಾರ ಬೆಳ್ತಂಗಡಿ ಯುವತಿ ನಾಪತ್ತೆ ಪ್ರಕರಣ ದಾಖಲು

ಬೆಳ್ತಂಗಡಿ ಯುವತಿ ನಾಪತ್ತೆ ಪ್ರಕರಣ ದಾಖಲು

61
0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಮಜಿಕುಡೇಲು ಎಂಬಲ್ಲಿನ ನಿವಾಸಿ ಸುಪ್ರೀತಾ(20) ಎಂಬವರು ಮಂಗಳವಾರ ನಸುಕಿನಿಂದ ನಾಪತ್ತೆಯಾಗಿರುವ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ.

ದಿವಂಗತ ಶೀನಪ್ಪ ಎಂಬವರ ಮಗಳಾಗಿರುವ ಈಕೆ ಸೋಮವಾರ ರಾತ್ರಿ ಎಂದಿನಂತೆ ಮನೆಯ ತಮ್ಮ ಕೋಣೆಯಲ್ಲಿ ಮಲಗಿದ್ದವರು ಮಂಗಳವಾರ ನಸುಕಿನ ವೇಳೆ ಕಾಣಿಸದೇ ಇದ್ದು, ಮೊಬೈಲ್‌ ಪೋನ್ ಕರೆಯೂ ಸ್ವೀಕರಿಸಿರಲಿಲ್ಲ. ಬಳಿಕ ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಆಕೆಯ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಅದರಂತೆ ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ‌ದಾಖಲಿಸಲಾಗಿದೆ.
ಈಕೆಯ ಬಗ್ಗೆ ತಿಳಿದವರು ಉಪ್ಪಿನಂಗಡಿ ಪೊಲೀಸ್‌ ಠಾಣೆಯನ್ನು ಸಂಪರ್ಕಿಸಬೇಕೆಂದು ಪೊಲೀಸರು ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here