
ಬೆಳ್ತಂಗಡಿ : ಮಿತ್ತಬಾಗಿಲು ಗ್ರಾಮದ ಕಿಲ್ಲೂರು ದರ್ಖಾಸು ಮನೆ ನಿವಾಸಿ ರಾಧಾಕೃಷ್ಣ ಆಚಾರ್ಯ (45)ರವರು ಇಂದಬೆಟ್ಟು ಗ್ರಾಮದ ಅಂಬ್ರೋಲಿ ಎಂಬಲ್ಲಿ ರಬ್ಬರ್ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ.5 ರಂದು ರಾತ್ರಿ ನಡೆದಿದೆ.
ಅವಿವಾಹಿತರಾದ ಇವರು ಮರದ ಕೆಲಸ ಮಾಡುತ್ತಿದ್ದರು. ಕೆಲ ಸಮಯಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮೃತರು ತಾಯಿ, ಸಹೋದರಿಯರು, ಬಂಧು ಬಳಗವನ್ನು ಅಗಲಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.