Home ಅಪರಾಧ ಲೋಕ ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿಯ ಕಿಡ್ನಾಪ್ ಗೆ ಯತ್ನ

ಬೆಳ್ತಂಗಡಿ : ಕಾಲೇಜ್ ವಿದ್ಯಾರ್ಥಿನಿಯ ಕಿಡ್ನಾಪ್ ಗೆ ಯತ್ನ

16
0

ಬೆಳ್ತಂಗಡಿ : ಸ್ಕೂಟರ್ ನಲ್ಲಿ ಕಾಲೇಜ್ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಕಿಡ್ನಾಪ್ ಮಾಡಲು ಯತ್ನಿಸಿದ ಘಟನೆ ನಡೆದಿದೆ.

ಬೆಳ್ತಂಗಡಿ ನಗರದ ಸುದೇಮುಗೇರು ಎಂಬಲ್ಲಿನ ನಿವಾಸಿ  ಪ್ರಥಮ ಪಿಯುಸಿ ವಿದ್ಯಾರ್ಥಿನಿ ಎಂದಿನಂತೆ ಫೆ.9 ರಂದು ಬೆಳಗ್ಗೆ ಸುಮಾರು 8:30 ಕ್ಕೆ ಸ್ಕೂಟರ್ ನಲ್ಲಿ ಸಂತೆಕಟ್ಟೆ ಬಸ್ ಹತ್ತಲು ಹೋಗುವಾಗ ಅಪರಿಚಿತ ನಂಬರ್ ಪ್ಲೇಟ್ ಗೆ ಬಟ್ಟೆ ಕಟ್ಟಿದ ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಸ್ಕೂಟರಿಗೆ ಅಡ್ಡಗಟ್ಟಿ ವಿದ್ಯಾರ್ಥಿನಿಯನ್ನು ಕಾರಿನೊಳಗೆ ಎಳೆದು ತಂದಾಗ ಬೊಬ್ಬೆ ಹೊಡೆದು ವಿರೋಧ ವ್ಯಕ್ತಪಡಿಸಿ ಹೊರಬಂದಿದ್ದಾಳೆ ಈವೇಳೆ  ಹಿಂಭಾಗದಿಂದ ಸ್ಕೂಟರ್ ಬರುವುದನ್ನು ನೋಡಿದ  ಚೂರಿಯಿಂದ ಬಾಲಕಿಯ ಕೈಗೆ ,ಬೆರಳಿಗೆ ಚುಚ್ಚಿ ಕಾಲೇಜ್ ಬ್ಯಾಗ್ ಹಿಡಿದುಕೊಂಡು ವಾಪಸ್ ಕಾರಿನೊಂದಿಗೆ ಅಪರಿಚಿತರು ಪರಾರಿಯಾಗಿರುವುದಾಗಿ ಮಾಹಿತಿಗಳು ಲಭ್ಯವಾಗುತ್ತಿದೆ.

ಗಾಯಗೊಂಡ ವಿದ್ಯಾರ್ಥಿನಿಯನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳ್ತಂಗಡಿ ಪೊಲೀಸರು ಆಸ್ಪತ್ರೆಗೆ ಆಗಮಿಸಿ ವಿದ್ಯಾರ್ಥಿನಿ ಬಳಿಯಿಂದ ಮಾಹಿತಿ ಪಡೆದುಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.

LEAVE A REPLY

Please enter your comment!
Please enter your name here