Home ಅಪರಾಧ ಲೋಕ ಬೆಳ್ತಂಗಡಿ ಬಾಲಕಿ ಅಪಹರಣ ಯತ್ನ ಘಟನೆ ಎಸ್.ಪಿ ಸ್ಪಷ್ಟನೆ

ಬೆಳ್ತಂಗಡಿ ಬಾಲಕಿ ಅಪಹರಣ ಯತ್ನ ಘಟನೆ ಎಸ್.ಪಿ ಸ್ಪಷ್ಟನೆ

0

ಬೆಳ್ತಂಗಡಿ: ಬೆಳ್ತಂಗಡಿ ಠಾಣಾ ವ್ಯಾಪ್ತಿಯಲ್ಲಿ ಶಾಲಾ ವಿದ್ಯಾರ್ಥಿನಿಯ ಅಪಹರಣ, ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ಬಳಿಕ, ದೂರಿನಲ್ಲಿ ಉಲ್ಲೇಖಿಸಿದಂತೆ ಯಾವುದೇ ವಾಹನ ಕಂಡುಬಂದಿಲ್ಲ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ವೈದ್ಯಕೀಯ ಪರೀಕ್ಷೆಯಲ್ಲಿ ಪ್ರಥಮವಾಗಿ ಇದು ಸ್ವಯಂ ಉಂಟುಮಾಡಿಕೊಂಡ ಗಾಯ (Self inflicted Wound) ಎಂದು ಕಂಡು ಬಂದಿದೆ.

ಈ ಘಟನೆ ಕುರಿತು ತಾನು ಸುಳ್ಳು ಹೇಳಿಕೆ ನೀಡಿದ್ದೆನೆಂದು ಬಾಲಕಿಯ ಹೇಳಿಕೆ ನೀಡಿದ್ದಾಳೆ.

ಬಾಲಕಿಯು ಅಪ್ರಾಪ್ತಯಾಗಿರುವುದರಿಂದ ಆಕೆಯ ಹಿತದೃಷ್ಠಿಯಿಂದ ಸದ್ರಿ ಘಟನೆಯನ್ನು ಸೂಕ್ಷ್ಮವಾಗಿ ಪರಿಗಣಿಸಿ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಅವರಿಂದ ಬಾಲಕಿಗೆ ಕೌನ್ಸೆಲಿಂಗ್ ನೀಡಲಾಗುವುದು ಹಾಗೂ ಮುಂದಿನ ಕಾನೂನು ಕ್ರಮವನ್ನು ನಿರ್ಧರಿಸ ಲಾಗುವುದು. ಅಪ್ರಾಪ್ತಗೆ ಚಲಾಯಿಸಲು ವಾಹನ ನೀಡಿರುವ ಕುರಿತು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version