Home ಅಪರಾಧ ಲೋಕ ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

5
0

ಬೆಳ್ತಂಗಡಿ;  ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರಿಗಳಿಗಾಗಿ ಬರುವ ಭಕ್ತರಿಗೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತಿದ್ದಾರೆ. ಬಹಳ ಮುಖ್ಯವಾಗಿ ಪಾದಯಾತ್ರಿಗಳ ಆರೋಗ್ಯ ರಕ್ಷಣೆಗಾಗಿ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಆರೋಗ್ಯ ಸೇವೆ ನೀಡುತ್ತಿರುವುದು ಅತ್ಯುತ್ತಮ ಸೇವೆಯಾಗಿದೆ ಎಂದು ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೆಸರರಾದ ಯಶೋಧರ ಅವರು ಹೇಳಿದರು.
ಪಾದಯಾತ್ರಿಗಳಿಗೆ ವೈದ್ಯಕೀಯ ಸೇವೆ ನೀಡುವ ಉದ್ದೇಶದಿಂದ ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಚಾರ್ಮಾಡಿಯಲ್ಲಿ ಫೆ.11 ರಂದು ತೆರೆಯಲಾದ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಾ, ಪಾದಯಾತ್ರಿಗಳಿಗೆ ಶುಭ ಹಾರೈಸಿದರು.
ಮಹಾಶಿವರಾತ್ರಿ ಸಂದರ್ಭದಲ್ಲಿ ಸಾವಿರಾರು ಭಕ್ತರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆಯ ಮೂಲಕ ಬರುತ್ತಿದ್ದು, ಇವರ ಆರೋಗ್ಯ ರಕ್ಷಣೆಗೆ ಅನುಕೂಲವಾಗುವಂತೆ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಮಾತೃಶ್ರೀ ಅಮ್ಮನವರ ಹಾಗೂ ಶ್ರೀ ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಆರೋಗ್ಯ ಶಿಬಿರಗಳನ್ನು ತೆರೆಯಲಾಗಿದೆ. ಚಾರ್ಮಾಡಿ, ಮುಂಡಾಜೆ, ಬೂಡುಜಾಲು, ಎಸ್.ಡಿ.ಎಂ ಆಸ್ಪತ್ರೆ, ಎಸ್.ಡಿ.ಎಂ ಡಿ.ಎಡ್ ಕಾಲೇಜು ಬಳಿ, ಹಾಗೂ ಧರ್ಮಸ್ಥಳ ಮುಂತಾದ 6 ಕಡೆಗಳಲ್ಲಿ ಆರೋಗ್ಯ ಶಿಬಿರಗಳನ್ನು ತೆರೆದು, ಅಗತ್ಯವಿರುವ ಔಷಧಿ, ಮುಲಾಮು,  ಬ್ಯಾಂಡೇಜ್ ಇತ್ಯಾದಿಗಳನ್ನು ಉಚಿತವಾಗಿ ಒದಗಿಸಲಾಗುತ್ತಿದೆ. 2025ರಲ್ಲಿ 31,874 ಮಂದಿ ಪಾದಯಾತ್ರಿಗಳಿಗೆ ಉಚಿತ ವೈದ್ಯಕೀಯ ಸೇವೆ ನೀಡಿದ್ದು, ಇದಕ್ಕಾಗಿ ಸರಿಸುಮಾರು 9.45 ಲಕ್ಷ ರೂಪಾಯಿಯನ್ನು  ವಿನಿಯೋಗಿಸಲಾಗಿತ್ತು ಎಂದು ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್ ತಿಳಿಸಿದರು.
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯ ಡಾ. ಸಹನ, ನರ್ಸಿಂಗ್ ಅಧೀಕ್ಷಕಿ ಶ್ರೀಮತಿ ಶೆರ್ಲಿ, ಶಿಬಿರದ ಸಂಯೋಜಕ ರವೀಂದ್ರ ಗುಡಿಗಾರ್ ಉಪಸ್ಥಿತರಿದ್ದರು. ಜಗನ್ನಾಥ ಎಂ. ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here