
ಬೆಳ್ತಂಗಡಿ: ರಾಜ್ಯದ 129 ಪೋಲೀಸ್ ಇನ್ಸ್ಪೆಕ್ಟರ್ ಗಳ ಫೆ.11 ರಂದು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹಲವಾರು ಗಂಭೀರ ಪ್ರಕರಣಗಳನ್ನು ಭೇದಿಸಿ ಸಾರ್ವಜನಿಕರೊಂದಿಗೆ ಜನಸ್ನೇಹಿಯಾಗಿ ಉತ್ತಮ ಸೇವೆ ಸಲ್ಲಿಸಿರುವ ಇನ್ಸ್ಪೆಕ್ಟರ್ ಬಿ.ಜಿ ಸುಬ್ಬಾಪುರ ಮಠ ಗದಗ ಜಿಲ್ಲೆಯ ಮುಳಗುಂದ ಪೋಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ.
ಬೆಳ್ತಂಗಡಿ ಪೋಲೀಸ್ ಠಾಣೆಯ ಇನ್ಸ್ಪೆಕ್ಟರ್ ಹುದ್ದೆಗೆ ಯಾರನ್ನು ನಿಯುಕ್ತಿಗೊಳಿಸದೇ ಇದ್ದು ಮುಂದಿನ ಪ್ರಕ್ರಿಯೆಯಲ್ಲಿ ಇನ್ಸ್ಪೆಕ್ಟರ್ ನೇಮಕವಾಗಲಿದೆ.