Home ಸ್ಥಳೀಯ ಸಮಾಚಾರ ಧರ್ಮಸ್ಥಳ; ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

ಧರ್ಮಸ್ಥಳ; ಶಿವರಾತ್ರಿ ಪಾದಯಾತ್ರಿಗಳ ಸ್ವಾಗತಕ್ಕೆ ಸಕಲ ಸಿದ್ಧತೆ, ಸ್ವಾಗತ ಕಾರ್ಯಾಲಯ ಉದ್ಘಾಟನೆ

6
0

ಧರ್ಮಸ್ಥಳ: ನಾಡಿನೆಲ್ಲೆಡೆಯಿಂದ ಫೆ. 15 ರಂದು ಶಿವರಾತ್ರಿಗೆ ಧರ್ಮಸ್ಥಳಕ್ಕೆ 50 ಸಾವಿರಕ್ಕೂ ಮಿಕ್ಕಿ ಪಾದಯಾತ್ರಿಗಳು ಬರುವ ನಿರೀಕ್ಷೆ ಇದ್ದು, ಅವರ ಸ್ವಾಗತ ಹಾಗೂ ವಸತಿ ಸೌಲಭ್ಯಕ್ಕೆ ಸಕಲ ಸಿದ್ಧತೆಗಳನ್ನು ಮಾಡಲಾಗಿದ್ದು
ಧರ್ಮಸ್ಥಳದಲ್ಲಿ ಮುಖ್ಯಪ್ರವೇಶದ್ವಾರದ ಬಳಿ ಸ್ವಾಗತ ಕಾರ್ಯಾಲಯವನ್ನು ಗುರುವಾರ ಧರ್ಮಾಧಿಕಾರಿಗಳಾದ ಪೂಜ್ಯ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿದರು.


ಧರ್ಮಸ್ಥಳ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶ್ರೀನಿವಾಸ ರಾವ್, ಅನ್ನಪೂರ್ಣ ಭೋಜನಾಲಯದ ವ್ಯವಸ್ಥಾಪಕರಾದ ಸುಬ್ರಹ್ಮಣ್ಯಪ್ರಸಾದ್, ಕ್ಷೇತ್ರದ ನೌಕರರು, ಯುವತಿ ಮಂಡಲದ ಸದಸ್ಯೆಯರು ಮತ್ತು ಊರಿನ ನಾಗರಿಕರು ಉಪಸ್ಥಿತರಿದ್ದರು.
ಇಲ್ಲಿ ತಂಪುಪಾನೀಯ ಮತ್ತು ಕುಡಿಯುವನೀರಿನ ಸೌಲಭ್ಯ, ಅಂಬುಲೆನ್ಸ್ ಸೇವೆ, ತುರ್ತು ಆರೋಗ್ಯ ಸೇವೆ, ಮಾಹಿತಿ ವಿಭಾಗ, ಪೊಲೀಸ್ ಚೌಕಿಯನ್ನೂ ತೆರೆಯಲಾಗಿದೆ.
ಉಜಿರೆಯಲ್ಲಿ ಎಸ್.ಡಿ.ಎಂ. ಶಿಕ್ಷಣಸಂಸ್ಥೆಗಳಲ್ಲಿ ಹಾಗೂ ಧರ್ಮಸ್ಥಳದಲ್ಲಿ ವಸತಿಛತ್ರಗಳಲ್ಲಿ ಪಾದಯಾತ್ರಿಗಳಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ. ಎಲ್ಲಾ ಕಡೆ ಸುರಕ್ಷತೆ ಮತ್ತು ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಸ್ವಯಂ-ಸೇವಕರು ಪಾದಯಾತ್ರಿಗಳ ಸೇವೆಗೆ ಸಜ್ಜಾಗಿದ್ದಾರೆ.

LEAVE A REPLY

Please enter your comment!
Please enter your name here