
ಬೆಳ್ತಂಗಡಿ; ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 13 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಆಲ್ವಿನ್ ರಾಡ್ರಿಗಸ್(53) ಎಂಬಾತನಾಗಿದ್ದಾನೆ
ಆರೋಪಿ 2013ರಲ್ಲಿ ಮಡಂತ್ಯಾರು ನಿವಾಸಿ ಚಿತ್ರಶೇಖರ್ ಎಂಬವರ ಮೇಲೆ ಹಲ್ಲೆ ನಡೆಸಿದ್ದು ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 13ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಈತನನ್ನು ಪೊಲೀಸರು ಬೆಂಗಳೂರಿನ ಸಂಪಿಗೆ ರಾಮನಗರದಲ್ಲಿ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.



