
ಬೆಳ್ತಂಗಡಿ: ರೆಖ್ಯ ಗ್ರಾಮದಲ್ಲಿ ನಡೆದ ದರೋಡೆ ಪ್ರಕರಣಕ್ಲೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ನಂಜುಂಡ ಮಾಗಡಿ ಎಂಬಾತನಾಗಿದ್ದಾನೆ
2017 ರಲ್ಲಿ ರೆಖ್ಯಾ ಎಂಬಲ್ಲಿ ನಡೆದ ದರೋಡೆ ಪ್ರಕರಣದ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣಾ ಅ.ಕ್ರ. 65/2017 ಕಲಂ, 397. 395 ಜೊತೆಗೆ 34 ಐಪಿಸಿ ಪ್ರಕರಣದಲ್ಲಿ ಆರೋಪಿಯಾದ ಈತ ಕಳೆದ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದಾ ಈತನನ್ನು ಬೆಂಗಳೂರು ಗಿಡ್ಡೆನಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ಫೆ.13 ರಂದು ನ್ಯಾಯಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಲಯವು ನ್ಯಾಯಾಂಗ ಬಂಧನ ವಿಧಿಸಿದೆ.








