Home ಅಪರಾಧ ಲೋಕ ಕನ್ಯಾಡಿ ಬೆಂಕಿ ಆಕಸ್ಮಿಕದಲ್ಲಿ ಗಾಯಗೊಂಡಿದ್ದ ಮಹಿಳೆ ಮೃತ್ಯು

ಕನ್ಯಾಡಿ ಬೆಂಕಿ ಆಕಸ್ಮಿಕದಲ್ಲಿ ಗಾಯಗೊಂಡಿದ್ದ ಮಹಿಳೆ ಮೃತ್ಯು

4
0

ಬೆಳ್ತಂಗಡಿ; ಬಚ್ವಲು ಮನೆಯಲ್ಲಿ ಒಲೆಗೆ ಬೆಂಕಿ ಹಚ್ಚುವ ವೇಳೆ ಬಟ್ಟೆಗೆ ಬೆಂಕಿತಗುಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ಸಂಭವಿಸಿದೆ.
ಮೃತ ಮಹಿಳೆ ನಡ ಕನ್ಯಾಡಿ ನಿವಾಸಿ ಮಂಜಪ್ಪ ನಾಯ್ಕ ಎಂಬವರ ಪತ್ನಿ ಮೀನಾಕ್ಷಿ (63) ಎಂಬವರಾಗಿದ್ದಾರೆ.
ಇವರು ಫೆ. 7ರಂದು ಮನೆಯ ಬಚ್ಚಲು ಕೋಣೆಯಲ್ಲಿ ನೀರು ಬಿಸಿ ಮಾಡಲು ಬೆಂಕಿ ಹಚ್ಚುವ ವೇಳೆ ಆಕಸ್ಮಿಕವಾಗಿ ಬಟ್ಟೆಗೆ ಬೆಂಕಿ ತಗುಲಿದೆ ಇವರು ಗಂಭೀರವಾಗಿ ಗಾಯಗೊಂಡಿದ್ದು ಕೂಡಲೇ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಫೆ.13ರಂದು ಮೃತ ಪಟ್ಟಿದ್ದಾರೆ. ಮೃತರು ಪತಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here