ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ 584ನೇ ಸೇವಾ ಯೋಜನೆಗೆ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.
ಬೆಳ್ತಂಗಡಿ ತಾಲೂಕು ಗರ್ಡಾಡಿ ನಿವಾಸಿಯಾದ ಉಮಾವತಿಯವರ 4ವರ್ಷದ ಮಗಳಾದ ಪ್ರಜ್ಞಾ ಕೆ. ಎಂಡೋಸಲ್ಫಾನಿಂದ ಬಳಲುತ್ತಿರುವ ಮಗುವಾಗಿದ್ದು ಈ ಮಗುವಿನ ಪ್ರತಿ ತಿಂಗಳ ಆರೋಗ್ಯದ ಚಿಕಿತ್ಸೆಯ ಸಹಾಯಕ್ಕಾಗಿ ಬಸ್ ಸ್ಟ್ಯಾಂಡ್ ನಲ್ಲಿ ಪೆನ್ನು ಮಾರಾಟ ಮಾಡುವ ಅಭಿಯಾನಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನ ಅರ್ಜುನ್ ಭಂಡಾರ್ಕರ್ ರವರು ಚಾಲನೆ ನೀಡಿದರು. ಸಂಘಟನೆಯ ಸ್ಥಾಪಕಾಧ್ಯಕ್ಷ ದೀಪಕ್ ಜಿ ಬೆಳ್ತಂಗಡಿ ಹಾಗೂ ಇತರರು ಇದ್ದರು.
