ಮಂಗಳೂರು: ಪವಿತ್ರ ರಮಝಾನ್‌ನ ಪ್ರಥಮ ಚಂದ್ರದರ್ಶನವು ಮಂಗಳವಾರ ಆಗಿರುವ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗದ ಕಾರಣ ಗುರುವಾರದಿಂದ ರಮಝಾನ್ ಉಪವಾಸ ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಅವರ ನಿರ್ದೇಶನದಂತೆ ಮಂಗಳೂರು ಝೀನತ್ ಬಕ್ಸ್ ಕೇಂದ್ರ ಜುಮಾ ಮಸೀದಿ ಹಾಗೂ ಈದ್ದಾನಿ’ ಮಸೀದಿಯ ಕೋಶಾಧಿಕಾರಿ ಎಸ್.ಎಂ. ರಶೀದ್ ಹಾಜಿ ತಿಳಿಸಿದ್ದಾರೆ.
ಉಡುಪಿ: ಇಂದು ಚಂದ್ರದರ್ಶನವಾಗದ ಕಾರಣ ಗುರುವಾರದಿಂದ ರಮಝಾನ್ ಪ್ರಾರಂಭ ಎಂದು ಉಡುಪಿ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಸಂಯುಕ್ತ ಖಾಝಿ ಝನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ತಿಳಿಸಿದ್ದಾರೆ.




