Home ಅಪರಾಧ ಲೋಕ ಶಿಬಾಜೆ ಶ್ರೀಧರ ಕೊಲೆ ಪ್ರಕರಣ ಮರುತನಿಖೆಗೆ ಎಸ್.ಐ.ಟಿ ರಚಿಸಿ ಸರಕಾರ ಆದೇಶ

ಶಿಬಾಜೆ ಶ್ರೀಧರ ಕೊಲೆ ಪ್ರಕರಣ ಮರುತನಿಖೆಗೆ ಎಸ್.ಐ.ಟಿ ರಚಿಸಿ ಸರಕಾರ ಆದೇಶ

0

ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣದ‌ ಮರು ತನಿಖೆಗೆ ಎಸ್.ಐ.ಟಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಬೆಂಗಳೂರು ಕೇಂದ್ರ ವಲಯದ ಐಜಿಪಿ ಲಾಂಬೂ ರಾವ್ ಅವರ ನೇತೃತ್ವದಲ್ಲಿ ರಚನೆಯಾಗಿರುವ ತಂಡದಲ್ಲಿ ಉಡುಪಿ ಜಿಲ್ಲಾ ಎಸ್.ಪಿ ಹರಿರಾವ್ ಶಂಕರ್ ಐಪಿಎಸ್, ಡಿವೈ
ಎಸ್.ಪಿ ಎಂ ಆರ್ ಹರೀಶ್ ಅವರಿದ್ದಾರೆ.
2022 ರ ಡಿ‌18 ರಂದು ಶಿಬಾಜೆಯಲ್ಲಿ ಆತ ಕೆಲಸ‌ಮಾಡುತ್ತಿದ್ದ ತೋಟದ ಒಳಗೆ ಶ್ರೀಧರನ ಕೊಲೆ ನಡೆದಿತ್ತು.
ಈ ಪ್ರಕರಣದಲ್ಲಿ ಹಲವಾರು ಪ್ರಭಾವಿಗಳು ಭಾಗಿಯಾಗಿರುವ ಆರೋಪ ಆರಂಭದಿಂದಲೂ ಕೇಳಿ ಬಂದಿತ್ತು ಈ ಹಿನ್ನಲೆಯಲ್ಲಿ ಬೆಳ್ತಂಗಡಿಯ ದಲಿತ ಸಂಘಟನೆಗಳು ಬೃಹತ್ ಹೋರಾಟಗಳನ್ನು ನಡೆಸಿದ್ದರು. ಆದರೆ ಶ್ರೀಧರನ ಕೊಲೆ ಪ್ರಕರಣದ ಆರೋಪಿಗಳು ಪತ್ತೆಯಾಗಲೇ ಇಲ್ಲ ಪೊಲೀಸ್ ತನಿಖೆ ಸಮರ್ಪಕವಾಗಿ ನಡೆಯದ ಹಿನ್ನಲೆಯಲ್ಲಿ ಹರೀಶ್ ಮುಗೇರ ಎಂಬವರು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಿ ಪ್ರಕರಣದ ಮರಯ ತನಿಖೆ ನಡೆಸುವಂತೆ ಕೋರಿಕೊಂಡಿದ್ದರು ನ್ಯಾಯಾಲಯದಲ್ಲಿ ನಡೆದ ವಿಚಾರಣೆಯ ಬಳಿಕ ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ ರಚಿಸುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಅದರಂತೆ ಇದೀಗ ರಾಜ್ಯ ಸರಕಾರ ವಿಶೇಷ ತನಿಖಾ ತಙಡವನ್ನು ರಚಿಸಿ ಆದೇಶ ಹೊರಡಿಸಿದೆ

NO COMMENTS

LEAVE A REPLY

Please enter your comment!
Please enter your name here

Exit mobile version