Home ಅಪರಾಧ ಲೋಕ ಅಂಗನವಾಡಿ ಸಹಾಯಕಿ ಆತ್ಮಹತ್ಯೆ

ಅಂಗನವಾಡಿ ಸಹಾಯಕಿ ಆತ್ಮಹತ್ಯೆ

4
0


ಬೆಳ್ತಂಗಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಅಂಗನವಾಡಿ ಸಹಾಯಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ನಡೆದಿದೆ.
ಚಾರ್ಮಾಡಿ ಗ್ರಾಪಂ ವ್ಯಾಪ್ತಿಯ
ಚಿಬಿದ್ರೆ ಗ್ರಾಮದ ಮುಕ್ಕುಡ ಸಮೀಪದ ನಿವಾಸಿ ಲೀಲಾ(55) ಆತ್ಮಹತ್ಯೆ ಮಾಡಿಕೊಂಡವರು.
ಸಮೀಪದ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಅವರಿಗೆ ಪತಿ,ಪುತ್ರ ಹಾಗೂ ಪುತ್ರಿ ಇದ್ದಾರೆ. ಧರ್ಮಸ್ಥಳ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

LEAVE A REPLY

Please enter your comment!
Please enter your name here