
ಬೆಳ್ತಂಗಡಿ: ಉಜಿರೆ ಗುರಿಪಳ್ಳ ಇಂದಬೆಟ್ಟು ರಸ್ತೆಯ ಅಂಬಡಬೆಟ್ಟು ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು ಈ ಬಗ್ಗೆ ಊರವರ ಮನವಿಯಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರ ವಿಶೇಷ ಮುತುವರ್ಜಿಯಿಂದ ಕರ್ನಾಟಕ ಸರಕಾರದ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ ಇವರು ಇಲಾಖೆಯ ವತಿಯಿಂದ ರೂಪಾಯಿ 2.5ಕೋಟಿ ಅನುದಾನ ಬಿಡುಗಡೆಗೊಳಿಸಿರುತ್ತಾರೆ. ಈ ಬಗ್ಗೆ ಕಳೆದ ಎರಡು ವರ್ಷಗಳಿಂದ ಸರಕಾರದ ಜೊತೆ ನಿರಂತರವಾಗಿ ಸಂಪರ್ಕ ಸಾದಿಸಿ ಮಾನ್ಯ ಲೋಕೋಪಯೋಗಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿ ಅನುದಾನ ಬಿಡುಗಡೆಗೊಳಿಸುವಲ್ಲಿ ಮಹತ್ತರ ಪಾತ್ರವಹಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಹಾಗೂ ಕರ್ನಾಟಕ ಸರಕಾರಕ್ಕೆ ಅಭಿನಂದನೆ ಸಲ್ಲಿಸಿ ಊರವರು ಹಾಕಿರುವ ಬ್ಯಾನರ್ ಅನ್ನು ಯಾರೋ ಕಿಡಿಗೇಡಿಗಳು ನಿನ್ನೆ ರಾತ್ರಿ ಹರಿದು ಹಾಕಿ ವಿಕೃತಿ ಮೆರೆದಿರುತ್ತಾರೆ ಸಮಾಜದ ಶಾಂತಿ ಕದಡುವ ಉದ್ದೇಶದಿಂದ ಇಂತಹ ವಿಕೃತ ಮನಸ್ಸಿನ ದುಷ್ಟ ಶಕ್ತಿಗಳ ಈ ಕೃತ್ಯ ಖಂಡನಾರ್ಹ ಈ ಬಗ್ಗೆ ಊರವರ ಪರವಾಗಿ ಪೊಲೀಸ್ ಇಲಾಖೆಗೆ ದೂರು ದಾಖಲಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಗುವುದೆಂದು ಸೇತುವೆ ನಿರ್ಮಾಣಕ್ಕೆ ಶ್ರಮವಹಿಸಿದ ಸ್ಥಳೀಯರು ಅಭಿಪ್ರಾಯ ವ್ಯಕ್ತ ಪಡಿಸಿರುತ್ತಾರೆ.