Home ಅಪರಾಧ ಲೋಕ ಉಜಿರೆಯಲ್ಲಿ ಸರಕಾರಿ ಜಾಗದಲ್ಲಿದ್ದ ಮನೆ ಧ್ವಂಸ ಜೀವಬೆದರಿಕೆ ಪೊಲೀಸರಿಗೆ ದೂರು

ಉಜಿರೆಯಲ್ಲಿ ಸರಕಾರಿ ಜಾಗದಲ್ಲಿದ್ದ ಮನೆ ಧ್ವಂಸ ಜೀವಬೆದರಿಕೆ ಪೊಲೀಸರಿಗೆ ದೂರು

0
2

ಬೆಳ್ತಂಗಡಿ; ತಾಲೂಕಿನ ಉಜಿರೆ ಗ್ರಾಮದ ಸ.ನಂಬ್ರ 406/1 ರ ಸರಕಾರಿ ಸ್ಥಳದಲ್ಲಿ ಮನೆ ನಿರ್ಮಿಸಿಕೊಂಡು ವಾಸವಿದ್ದ ಉಜಿರೆ ಗ್ರಾಮದ ಕಕ್ಕರೆಬೆಟ್ಟು ನಿವಾಸಿ ರಾಜೀವಿ ಎಂಬವರ ಮನೆಯನ್ನು ಸ್ಥಳೀಯ ಓಡಲ ನಿವಾಸಿ ರಫೀಕ್ ಎಂಬಾತ ಸಂಪೂರ್ಣವಾಗಿ ಕೆಡವಿ ಮನೆಯ ಸೊತ್ತುಗಳನ್ನು ಬೀದಿಗೆಸೆದ ಘಟನೆ ನಡೆದಿದ್ದು ಇದರ ವಿಡಿಯೋ ಮಾಡಿದ ಅಪ್ರಾಪ್ತ ಬಾಲಕಿಗೆ ಈತ ಬೆದರಿಕೆಯನ್ನೂ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ.
ರಾಜೀವಿಯವರು ಸದ್ರಿ ಮನೆಯಲ್ಲಿ ಪತಿ‌ ಹಾಗೂ ಮಗಳೊಂದಿಗೆ ವಾಸವಾಗಿದ್ದರು.
ಫೆ.27 ರಂದು 11.00 ಗಂಟೆಗೆ ರಾಜೀವಿ ಮತ್ತು ಪತಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ರಫೀಕ್ ಎಂಬವರು ಮನೆಯಲ್ಲಿ ಯಾರು ಇಲ್ಲದಿರುವುದನ್ನು ಮನಗಂಡು ಮನೆಯೊಳಗೆ ಅಕ್ರಮವಾಗಿ ಪ್ರವೇಶ ಮಾಡಿ ಮನೆಯನ್ನು ಸಂಪೂರ್ಣವಾಗಿ ನಾಶಪಡಿಸಿರುತ್ತಾರೆ ಅಲ್ಲದೇ ಮನೆಯಲ್ಲಿದ್ದ ಟಿ.ವಿ. ಫ್ರಿಡ್ಜ್, ಗ್ಯಾಸ್ ಸಿಲಿಂಡರ್, ಪೀಠೋಪಕರಣಗಳು, ಬಟ್ಟೆ ಬರೆ, ದಿನಸಿ ಸಾಮಾನು ಇನ್ನಿತ್ಯಾದಿ ಎಲ್ಲಾ ವಸ್ತುಗಳನ್ನು ಮನೆಯಿಂದ ತೆಗೆದು ಬೀದಿಗೆ ಎಸೆದಿದ್ದಾರೆ. ಈ ಕೃತ್ಯದ ಬಗ್ಗೆ ದಂಪತಿಯ ಅಪ್ರಾಪ್ತ ಪ್ರಾಯದ ಮಗಳು ಕೂಡಲೇ ಸ್ಥಳಕ್ಕೆ ಧಾವಿಸಿ ಎದುರುದಾರರ ಈ ಅಕ್ರಮ ಕೆಲಸವನ್ನು ವಿಡಿಯೋ ರೆಕಾರ್ಡಿಂಗ್ ಮಾಡಲು ಹೋದಾಗ.
ಎದುರುದಾರರು “ನೀನು ಏನಾದರೂ ದೂರನ್ನು ನೀಡಿದರೆ ನಿನ್ನನ್ನು ಹಾಗೂ ನಿನ್ನ ಮನೆಯವರನ್ನು ಜೀವ ಸಹಿತ ಬಿಡುವುದಿಲ್ಲ” ಎಂದು ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ದೂರಿನಲ್ಲಿ ಆಪಾದಿಸಲಾಗಿದೆ.

ಭಯಗೊಂಡ ಅಪ್ರಾಪ್ತ ಬಾಲಕಿ ಜೋರಾಗಿ ಅಳುತ್ತಿದ್ದ ಸಂದರ್ಭದಲ್ಲಿ ನೆರೆಕರೆಯವರಾದ ತ್ಯಾಗರಾಜ್ ಮತ್ತು ಜಯ ಇವರು ಸ್ಥಳಕ್ಕೆ ಧಾವಿಸಿ ಎದುರುದಾರರ ಕೃತ್ಯವನ್ನು ಪ್ರಶ್ನಿಸಿದಾಗ ಆತ ಅವರಿಗೂ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿರುವುದಾಗಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ.
ಇಡೀ ಘಟನೆಯ ವಿಡಿಯೋ ಸಹಿತ ಫೋಟೋ ಹೊಂದಿರುವ ಪೆನ್‌ಡ್ರೈವನ್ನು ದೂರಿನ ಜೊತೆಗೆ ಲಗತ್ತಿಸಿ ಪೊಲೀಸ್ ಇಲಾಖೆಗೆ ಸಲ್ಲಿಸಿದ್ದಾರೆ.
ಮನೆಯನ್ನು ಸಂಪೂರ್ಣ ಹಾಳುಗೆಡವ ಲಾಗಿದ್ದು
ಇದರಿಂದಾಗಿ ಸುಮಾರು 10 ಲಕ್ಷ ರೂ. ಗಳಷ್ಟು ನಷ್ಟ ಉಂಟಾಗಿದೆ ಎಂದು
ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

NO COMMENTS

LEAVE A REPLY

Please enter your comment!
Please enter your name here