
ಬೆಳ್ತಂಗಡಿ; ರಾಷ್ಟ್ರೀಯ ಹೆದ್ದಾರಿಯ ಕಲ್ಮಂಜ ಗ್ರಾಮದ ನಿಡಿಗಲ್ ಸಮೀಪದ ಗುರಿಪಳ್ಳ ಕ್ರಾಸ್ ಎಂಬಲ್ಲಿ ರಸ್ತೆ ಬದಿ ಬೆಂಕಿ ಹೊತ್ತಿಕೊಂಡ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ರಸ್ತೆ ಬದಿಯ ಖಾಸಗಿ ಸ್ಥಳದಲ್ಲಿ ಆಕಸ್ಮಿಕವಾಗಿ ಬೆಂಕಿ ಉಂಟಾಗಿದ್ದು ಸ್ಥಳದಲ್ಲಿ ಭಾರಿ ಪ್ರಮಾಣದ ಮುಳಿಹುಲ್ಲು ಇದ್ದ ಕಾರಣ ಬೆಂಕಿ ವೇಗವಾಗಿ ಹರಡಿ ಮರ ಮಟ್ಟುಗಳಿಗೂ ಹಾನಿ ಉಂಟಾಗಿದೆ.
ತಕ್ಷಣ ಸ್ಥಳಕ್ಕೆ ಧಾವಿಸಿದ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಬೆಂಕಿ ಇನ್ನಷ್ಟು ಹರಡದಂತೆ ಕ್ರಮ ಕೈಗೊಂಡರು.
ಅಗ್ನಿಶಾಮಕ ದಳ ಆಗಮಿಸಿ ಬೆಂಕಿಯನ್ನು ಹತೋಟಿಗೆ ತಂದಿತು.