ಧರ್ಮಸ್ಥಳ: ಧರ್ಮಸ್ಥಳದಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಪಿಕಪ್ ಹಾಗೂ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದ ಬೈಕ್ ನಡುವೆ ನೇತ್ರಾವತಿ ಸೇತುವೆಯ ಬಳಿ ಅಪಘಾತ ಸಂಭವಿಸಿದ ಘಟನೆ ಮಾ.2ರಂದು ನಡೆದಿದ್ದು ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ.
ಅಪಘಾತದಲ್ಲಿ ಬೈಕ್ ಸವಾರ ಕನ್ಯಾಡಿ ಕೊರಗಪ್ಪ ಪೂಜಾರಿಯವರ ಪುತ್ರ ನವೀನ್ ಪೂಜಾರಿ ಗಂಭೀರ ಗಾಯಗೊಂಡು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಾ.12 ರಂದು ಮೃತಪಟ್ಟಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ
