ಬೆಳ್ತಂಗಡಿ; ಇತಿಹಾಸ ಪ್ರಸಿದ್ಧ 33 ನೇ ವರ್ಷದ ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳವು ಮಾರ್ಚ್ 21 ,22 ರಂದು ನಡೆಯಲಿದ್ದು , ಕಂಬಳದ ಪೂರ್ವಭಾವಿ ಸಭೆಯಲ್ಲಿ ಖ್ಯಾತ ಉದ್ಯಮಿ , ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡೀಸ್ ಹಳ್ಳಿಮನೆ ಉಜಿರೆ ಇವರನ್ನು ಕಂಬಳ ಸಮಿತಿಯ ನೂತನ ಸಂಚಾಲಕರನ್ನಾಗಿ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕಂಬಳ ಸಮಿತಿ ಗೌರವಾಧ್ಯಕ್ಷ ರಕ್ಷಿತ್ ಶಿವರಾಂ , ಅಧ್ಯಕ್ಷ ನಿತೀಶ್ ಕೋಟ್ಯಾನ್ , ಕಾರ್ಯಾಧ್ಯಕ್ಷ ಶೇಖರ್ ಕುಕ್ಕೇಡಿ ಹಾಗೂ ಸಮಿತಿ ಪದಾಧಿಕಾರಿಗಳು, ಸಲಹೆಗಾರರು, ಸದಸ್ಯರು ಉಪಸ್ಥಿತರಿದ್ದರು.








