Home ಬ್ರೇಕಿಂಗ್‌ ನ್ಯೂಸ್ ಕೇರಳ ತಮಿಳು ನಾಡು ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ

ಕೇರಳ ತಮಿಳು ನಾಡು ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ

0

ಹೊಸದಿಲ್ಲಿ: ಇಡೀ ದೇಶದ ಗಮನ ಸೆಳೆದಿರುವ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಭಾನುವಾರ (ಮಾ.15) ಪ್ರಕಟಿಸಿದೆ. ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ವಿಧಾನಸಭೆಗೆ ಏಪ್ರಿಲ್ 9 ರಂದು ಮತದಾನ ಪ್ರಾರಂಭವಾಗಲಿದ್ದು, ಮೇ 4 ರಂದು ಮತ ಎಣಿಕೆ ನಡೆಯಲಿದೆ ಎಂದು ಮಾಹಿತಿ ನಿಡಿದರು.

ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದರು.

2026 ರ ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮತದಾನ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ಮೇಲ್ವಿಚಾರಣೆಯನ್ನು ಬಲಪಡಿಸಲು ಎಲ್ಲಾ ಮತಗಟ್ಟೆಗಳಲ್ಲಿ 100 ಪ್ರತಿಶತ ವೆಬ್‌ಕಾಸ್ಟಿಂಗ್ ಅನ್ನು ಭಾರತೀಯ ಚುನಾವಣಾ ಆಯೋಗ ಸಕ್ರಿಯಗೊಳಿಸುತ್ತದೆ ಎಂದು ಜ್ಞಾನೇಶ್ ಕುಮಾರ್ ಹೇಳಿದ್ದಾರೆ.

ಮತದಾನ ದಿನಾಂಕ ಹೀಗಿದೆ

ಐದು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ 2026 ರ ವಿಧಾನಸಭಾ ಚುನಾವಣೆಗೆ ಚುನಾವಣಾ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ ಭಾನುವಾರ ಪ್ರಕಟಿಸಿದ್ದು, ಏಪ್ರಿಲ್ 9 ರಂದು ಮತದಾನ ಪ್ರಾರಂಭವಾಗಲಿದ್ದು, ಮೇ 4 ರಂದು ಮತ ಎಣಿಕೆ ನಡೆಯಲಿದೆ. ಚುನಾವಣಾ ಸಮಿತಿಯ ಪ್ರಕಾರ, ಅಸ್ಸಾಂ, ಕೇರಳ ಮತ್ತು ಪುದುಚೇರಿ ಕೇಂದ್ರಾಡಳಿತ ಪ್ರದೇಶದಲ್ಲಿ ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ತಮಿಳುನಾಡಿನಲ್ಲಿ ಏಪ್ರಿಲ್ 23 ರಂದು ಮತದಾನ ನಡೆಯಲಿದೆ.

ಪಶ್ಚಿಮ ಬಂಗಾಳದಲ್ಲಿ ಏಪ್ರಿಲ್ 23 ಮತ್ತು 29 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೇ 4 ರಂದು ಮತ ಎಣಿಕೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಭಾನುವಾರ ಘೋಷಿಸಿದ್ದಾರೆ.

ರಾಜ್ಯ: ದಿನಾಂಕ

ಅಸ್ಸಾಂ: ಏಪ್ರಿಲ್‌ 9

ಪುದುಚೇರಿ: ಏಪ್ರಿಲ್‌ 9

ಕೇರಳ: ಏಪ್ರಿಲ್‌ 9:

ತಮಿಳುನಾಡು: ಏಪ್ರಿಲ್‌ 23

ಪ.ಬಂಗಾಳ: ಏಪ್ರಿಲ್ 23 ಮತ್ತು 29.

ಉಪ ಚುನಾವಣೆ: ಏಪ್ರಿಲ್‌ 9

ಮತ ಎಣಿಕೆ: ಮೇ 4

NO COMMENTS

LEAVE A REPLY

Please enter your comment!
Please enter your name here

Exit mobile version