
ಮಂಗಳೂರು, ಫಾರ್ಚೂನರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ನಿಸಾರ್ (28) ಹಾಗೂ ಮೊಹಮ್ಮದ್ ಜಮಾಲುದ್ದೀನ್ (24) ಬಂಧಿತರು.
ಮಾ.18ರಂದು ನಸುಕಿನ ಜಾವ 4.45ಕ್ಕೆ ಬಜಪೆ ಠಾಣಾ ವ್ಯಾಪ್ತಿಯ ಎಡಪದವು ಸಸ್ತಾವು ಎಂಬಲ್ಲಿ ಫಾರ್ಚೂನರ್ ಕಾರಿನಲ್ಲಿ ಗೋವುಗಳನ್ನು ಕದ್ದು ತೆಗೆದುಕೊಂಡು ಹೋಗುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಮೇರೆಗೆ ಎಸಿಪಿ ಶ್ರೀಕಾಂತ್, ಪಿಐ ಬಾಲಕೃಷ್ಣ ಮಾರ್ಗದರ್ಶನದಲ್ಲಿ ಬಜಪೆ ಪೊಲೀಸ್ ಠಾಣಾ ಪಿಎಸ್‌ಐ ಲತಾ ಮತ್ತು ಸಿಬ್ಬಂದಿ ರಾಜೇಶ್, ಚಿದಾನಂದ, ಪ್ರಕಾಶ್ ದಾಳಿ ಮಾಡಿದ್ದಾರೆ. ಈ ವೇಳೆ ನಾಲ್ಕು ಗೋವುಗಳು, ಕಾರು, ಒಂದು ತಲವಾರ್ ಅನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.








