ಉಜಿರೆ: ನಿವೃತ್ತ ಯೋಧರಿಗೆ ಭಾರತೀಯ ಸೇನೆಯ ಮಹಾ ದಂಡನಾಯಕರಾಗಿರುವ ಜನರಲ್ ಉಪೇಂದ್ರ ದ್ವಿವೇದಿ ಯವರು ನೀಡುವ “ನಿವೃತ್ತ ಸಾಧಕ ಯೋಧ” ಪ್ರಶಸ್ತಿಗೆ ಭಾಜನರಾದ ಲ | ಗೋಪಾಲಕೃಷ್ಣ ಕಾಂಚೋಡು ರವರು ಇಂದು ದೆಹಲಿಯಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿ ಉಜಿರೆಗೆ ಆಗಮಿಸಿದ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಭವ್ಯ ಸ್ವಾಗತದೊಂದಿಗೆ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಅಖಲ ಕರ್ನಾಟಕ ನಿವೃತ್ತ ಸೈನಿಕರ ಸಂಘದ ತಾಲೂಕು ಅಧ್ಯಕ್ಷ ಎನ್.ಪಿ ತಂಗಚ್ಚನ್ ಧರ್ಮಸ್ಥಳ, ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಉಷಾಕಿರಣ್ ಕಾರಂತ್, ಪುಷ್ಪಾವತಿ ಆರ್ ಶೆಟ್ಟಿ, ಉಜಿರೆ ವರ್ತಕರ ಸಂಘದ ಸ್ಥಾಪಕ ಅಧ್ಯಕ್ಷ ಅರವಿಂದ ಕಾರಂತ್, ಪ್ರಸ್ತುತ ಅಧ್ಯಕ್ಷರಾದ ಪ್ರಸಾದ್ ಬಿಎಸ್, ಉಪಾಧ್ಯಕ್ಷರಾದ ಪ್ರಭಾಕರ ಜೈನ್, ರಮಾನಂದ, ಹಳ್ಳಿಮನೆ ಪ್ರವೀಣ್ ಫೆರ್ನಾಂಡಿಸ್, ವಿಶ್ವನಾಥ್ ಭಂಡಾರಿ, ರೋಟರಿ ಕ್ಲಬ್ ಕಾರ್ಯದರ್ಶಿ ದಯಾಕರ್, ವಾರ್ಡ್ ಅಧ್ಯಕ್ಷ ವಿಶ್ವನಾಥ್ ನಾಯ್ಕ, ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್, ನಿವೃತ್ತ ಸೈನಿಕರ ಸಂಘದ ಪದಾಧಿಕಾರಿಗಳು, ವರ್ತಕರ ಸಂಘದ ಇತರ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿ ಅಭಿನಂದಿಸಿದರು.












