Home ಸ್ಥಳೀಯ ಸಮಾಚಾರ ಧರ್ಮಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ

ಧರ್ಮಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ

3
0

ಬೆಳ್ತಂಗಡಿ; ಧರ್ಮಸ್ಥಳ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ 37ರಲ್ಲಿ ಮರ್ಧಾಳ ಬ್ರಾಂತಿಕಟ್ಟೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಹಲವರು ಗಾಯಗೊಂಡಿದ್ದಾರೆ. ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಇಕೊ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ 9 ಜನರಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ.
ಗಂಭೀರವಾಗಿ ಗಾಯಗೊಂಡವರನ್ನು ಮಂಜುನಾಥ, ಪ್ರಮೋದ್ ಮತ್ತು ತುಳಸಿ ಎಂದು ಗುರುತಿಸಲಾಗಿದೆ. ಇತರರಾದ ಪ್ರಿಯಾ, ವಿಠಲ, ಚಾಲಕ ಪ್ರೇಮಣ್ಣ, ಧನಲಕ್ಷ್ಮಿ ಹಾಗೂ ಸಮರ್ಥ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳು ಸಾಗರ ಮೂಲದವರಾಗಿದ್ದಾರೆ ಎಂದು ತಿಳಿದುಬಂದಿದೆ.
ಗಾಯಗೊಂಡವರನ್ನು ತಕ್ಷಣ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಹಾಗೂ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here