ಬೆಳ್ತಂಗಡಿ: ಮಾ.30ರಂದು ಮಹಾವೀರ ಜಯಂತಿ ರಜೆಯನ್ನು ಸರಕಾರ ಘೋಷಿಸಿರುವ ಹಿನ್ನಲೆಯಲ್ಲಿ ಅಂದು ನಡೆಯಬೇಕಾಗಿದ್ದ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಪರೀಕ್ಷೆಯನ್ನು ಮರುದಿನ ಮಾ.31ರಂದು ನಡೆಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶನ ನೀಡಿದೆ.
2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ನ್ನು ಮಾ. 18 ರಿಂದ ಎ.2ರವರೆಗೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿದ್ದು, ಅದರಂತೆ ಈಗಾಗಲೇ ಪರೀಕ್ಷೆ ನಡೆಯುತ್ತಿದೆ. ಸದರಿ ವೇಳಾಪಟ್ಟಿಯನ್ವಯ ತೃತೀಯ ಭಾಷೆ ಪರೀಕ್ಷೆಯನ್ನು ಮಾ. 30ರಂದು ನಿಗಧಿಪಡಿಸಲಾಗಿತ್ತು. ಆದರೆ ಸರ್ಕಾರದ ಅಧಿಸೂಚನೆ ಸಂಖ್ಯೆ:ಸಿಆಸುಇ 07 ಹೆಚ್‌ಹೆಚ್‌ಎಲ್ 2026 ದಿನಾಂಕ:26-03-2026 ರನ್ನಯ ಮಹಾವೀರ ಜಯಂತಿ ಪ್ರಯುಕ್ತ ಘೋಷಿಸಲಾಗಿರುವ ಸಾರ್ವತ್ರಿಕ ರಜಾ ದಿನವನ್ನು ಮಾ.31 ಮಂಗಳವಾರ ಬದಲಾಗಿ ಮಾ.30 ಸೋಮವಾರ ಎಂದು ಮಾರ್ಪಡಿಸಿ ಆದೇಶಿಸಲಾಗಿದೆ. ಈ ಹಿನ್ನಲೆಯಲ್ಲಿ ಪರೀಕ್ಷೆಯ ದಿನಾಂಕವನ್ನು ಮಾ 30ರಿಂದ ಮಾ 31 ಕ್ಕೆ ಬದಲಿಸಲಾಗಿದೆ
