Home ಅಪರಾಧ ಲೋಕ ಮಂಗಳೂರು; ರೌಡಿ ಶೀಟರ್ ಹತ್ಯೆ, ಬೈಕ್ ಅಡ್ಡಗಟ್ಟಿ ದುಷ್ಕರ್ಮಿಗಳಿಂದ ದಾಳಿ

ಮಂಗಳೂರು; ರೌಡಿ ಶೀಟರ್ ಹತ್ಯೆ, ಬೈಕ್ ಅಡ್ಡಗಟ್ಟಿ ದುಷ್ಕರ್ಮಿಗಳಿಂದ ದಾಳಿ

0

ಮಂಗಳೂರು; ಮಂಗಳೂರು ನಗರದ ಹೊರವಲಯದ ತೊಕ್ಕೊಟ್ಟು ಫೈಓವ‌ರ್ ಮೇಲ್ಬಾಗದಲ್ಲಿ ಶುಕ್ರವಾರ ಬೆಳಿಗ್ಗೆ ರೌಡಿ ಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಮುಳ್ಳುಗುಡ್ಡೆ ಹೌಸ್ಕೃತಲಪಾಡಿ ನಿವಾಸಿ ಆರಿಫ್ ಯಾನೆ ‘ಟಾಬ್ಲೆಟ್ ಆರಿಫ್ (46) ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಆರಿಫ್ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಢಿಕ್ಕಿ ಹೊಡೆದಿದ್ದಾರೆ. ಢಿಕ್ಕಿಯಿಂದ ರಸ್ತೆಗೆ ಬಿದ್ದ ತಕ್ಷಣವೇ, ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಲಾಗಿದೆ ಎನ್ನಲಾಗಿದೆ.

ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳು ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ದಕ್ಷಿಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ ಎಂದು ತಿಳಿದು ಬಂದಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version