ಬೆಳ್ತಂಗಡಿ: ಗುರುವಾಯನಕೆರೆ ಕಡೆಯಿಂದ ಹೋಗುವ ಕಾರು ಮತ್ತು ಕಾಪಿನಡ್ಕ ಕಡೆಯಿಂದ ಬರುತ್ತಿರುವ ಆಟೋ ನಡುವೆ ಕಾಪಿನಡ್ಕ ಸೇತುವೆಯ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಲವರಿಗೆ ಗಾಯವಾದ ಘಟನೆ ಬುಧವಾರ ಸಂಜೆ ನಡೆದಿದೆ.
ಕಾರು ಮತ್ತು ಆಟೋದಲ್ಲಿದ್ದವರಿಗೆ ಗಾಯಗಳಾಗಿದ್ದು ಅವರನ್ನು ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ಸೇರಿಸಲಾಗಿದೆ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ ಕೆಲ ಸಮಯ ಟ್ರಾಫಿಕ್ ಜಾಮ್ ಸೃಷ್ಟಿಯಾಗಿತ್ತು.
