ಬೆಳ್ತಂಗಡಿ; ತಾಲೂಕಿನಲ್ಲಿ ಕ್ರೈಸ್ತ ಬಾಂಧವರು ಶುಭ ಶುಕ್ರವಾರವನ್ನು ಧರ್ಮಿಕ ವಿಧಿ ವಿಧಾನಗಳೊಂದಿಗೆ ಆಚರಿಸಿದರು.
ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಧಾರ್ಮಿಕ ವಿಧಿವಿಧಾನಗಳಿಗೆ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ.ವಂ ಜೇಮ್ಸ್ ಪಟ್ಟೇರಿಲ್ ಅವರು ನೇತೃತ್ವ ವಹಿಸಿದ್ದರು. ತಾಲೂಕಿನ ಎಲ್ಲ ಚರ್ಚ್ ಗಳಲ್ಲಿಯೂ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಸ್ಥಳೀಯ ಚರ್ಚ್ ಗಳ ಧರ್ಮಗುರುಗಳ ನೇತೃತ್ವದಲ್ಲಿ ಯೇಸುಕ್ರಿಸ್ತರ ಯಾತನೆ ಮರಣವನ್ನು ನೆನಪಿಸುವ ‘ಶಿಲುಬೆಯ ಹಾದಿ’ ನಡೆಯಿತು ನೂರಾರು ಮಂದಿ ಭಕ್ತರು ಕಾರ್ಯಕ್ರಮಗಳಲ್ಲಿ ಭಾಗಿಗಳಾದರು.
