ಬೆಳ್ತಂಗಡಿ. ತಾಲೂಕಿನ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಇವರ ಮನವಿ ಮೇರೆಗೆ ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಭೇಟಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿನವಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯರು ಇಲ್ಲಿಯ ಕಿರು ಸೇತುವೆಯ ಬಗ್ಗೆ ಬೇಡಿಕೆನಿಟ್ಟರು ಬೇಟಿಗೆ ಸಚಿವರು ಪೂರಕವಾಗಿ ಸ್ಪಂದಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾದ ನಾಗೇಶ್ ಕುಮಾರ್ ಗೌಡ, ಸ್ಥಳೀಯರಾದ ಯಶೋಧರ್ ಚಾರ್ಮಾಡಿ, ಅಶ್ರಫ್ ನೆರಿಯ, ಪ್ರದೀಪ್ ಕೆ ಸಿ ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.





