ಬೆಳ್ತಂಗಡಿ:ಮೊಗ್ರು ಗ್ರಾಮ ಬರುoಗುಡೇಲು ಸಮೀಪ ಅರಣ್ಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರ ಪರಿಣಾಮ ಪಕ್ಕದಲ್ಲಿರುವ ಅರಣ್ಯ ಪ್ರದೇಶಕ್ಕೂ ಬೆಂಕಿ ಹಬ್ಬಿದ್ದು ಇದರಿಂದಾಗಿ ಇನ್ನಷ್ಟು ಅರಣ್ಯ ಪ್ರದೇಶಕ್ಕೆ ಬೆಂಕಿ ವ್ಯಾಪಿಸುವ ಸಾಧ್ಯತೆ ಇರುವುದರಿಂದ ಆತಂಕ ಸೃಷ್ಟಿಯಾಗಿದೆ. ಬೆಂಕಿಯಿಂದಾಗಿ ಅಪಾರ ನಷ್ಟ ಉಂಟಾಗಿದೆ. ಘಟನೆ ಗಮನಿಸಿದ ತಕ್ಷಣ ಅರಣ್ಯ ಇಲಾಖೆ ಹಾಗೂ ನೆರೆಯವರಿಗೆ ಸಹ ಮಾಹಿತಿ ನೀಡಿ, ಬೆಂಕಿ ನಂದಿಸುವ ಕಾರ್ಯದಲ್ಲಿ ಸಹಕರಿಸುವಂತೆ ಮನವಿ ಮಾಡಲಾಗಿದೆ. ಸ್ಥಳೀಯರು ಹಾಗೂ ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳ ತಂಡ ತಕ್ಷಣ ಕ್ರಮ ಕೈಗೊಂಡು ಬೆಂಕಿ ನಂದಿಸಿ ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ
