Home ಮನೋರಂಜನೆ ಬೆಳ್ತಂಗಡಿ : ಕಾಂತಾರ ಖ್ಯಾತಿಯ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ : ಕಾಂತಾರ ಖ್ಯಾತಿಯ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ

0

ಬೆಳ್ತಂಗಡಿ : ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಕಾಂತಾರ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿರುವ ಡಿವೈನ್‌ಸ್ಟಾರ್ ರಿಷಬ್ ಶೆಟ್ಟಿ, ದಂಪತಿ ಸಮೇತ ಏ.6 ರಂದು ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾದ ಡಿ. ಸುರೇಂದ್ರ ಕುಮಾರ್, ಬೆಂಗಳೂರು ಕ್ಷೇಮವನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರದ್ಧಾ ಅಮಿತ್, ಆರ್ಯಮನ್ ಹಾಗೂ ಕಿಯಾಂಶ್ ಉಪಸ್ಥಿತರಿದ್ದರು.

ಅನಂತರ ರಿಷಬ್ ಶೆಟ್ಟಿ ಹಾಗೂ ಅವರ ಕುಟುಂಬಸ್ಥರಿಂದ ಶ್ರೀ ಮಂಜುನಾಥ ಸ್ವಾಮಿಗೆ ರಂಗಪೂಜೆ ಸೇವೆ ನೆರವೇರಿತು.

NO COMMENTS

LEAVE A REPLY

Please enter your comment!
Please enter your name here

Exit mobile version