ಬಂದಾರು : ಎ 08 ಬಂದಾರು ಗ್ರಾಮ ಶ್ರೀ ಕ್ಷೇತ್ರ ಕುರಾಯ ಸದಾಶಿವ ದೇವಸ್ಥಾನ ಇದರ ಏಪ್ರಿಲ್ 02 ರಿಂದ 10 ವರೆಗೆ ನಡೆಯುತ್ತಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ಜಾತ್ರೋತ್ಸವ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿಗಳು, ಜಾತ್ರೋತ್ಸವ ಸಮಿತಿ, ಅಭಿವೃದ್ಧಿ ಸಮಿತಿ, ಯಕ್ಷಗಾನ ಸಮಿತಿ, ಪದಾಧಿಕಾರಿಗಳು,ಅರ್ಚಕರು, ಪ್ರಮುಖರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.
