Home ಅಪರಾಧ ಲೋಕ ಬೆಳ್ತಂಗಡಿ : ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ; ಪತ್ನಿ ಸೌಮ್ಯ ಶೆಟ್ಟಿಯನ್ನು ಬಂಧಿಸಿದ ಕಾರ್ಕಳ...

ಬೆಳ್ತಂಗಡಿ : ಉದ್ಯಮಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣ; ಪತ್ನಿ ಸೌಮ್ಯ ಶೆಟ್ಟಿಯನ್ನು ಬಂಧಿಸಿದ ಕಾರ್ಕಳ ಪೊಲೀಸರು

0

ಬೆಳ್ತಂಗಡಿ : ಪುತ್ತೂರು ತಾಲೂಕಿನ ನೆಲ್ಯಾಡಿ ನಿವಾಸಿ ಬಿ.ಸುದೀಪ್ ರೈ (31) ಎಂಬಾತ ಮಾ.17 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಾ.29 ರಂದು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಪ್ರಕರಣ ಸಂಬಂಧಿಸಿದಂತೆ ಪತ್ನಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿಯನ್ನು ಕಾರ್ಕಳ ನಗರ ಪೊಲೀಸರು ಏ.11 ರಂದು ಸಂಜೆ ಬಂಧಿಸಿದ್ದಾರೆ.

ಪುತ್ತೂರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ(28) ಜೊತೆ ಮನೆಮಂದಿಗೆ ಹೇಳದೆ ಫೆ.17 ರಂದು ವಿವಾಹ ನೊಂದಣಿ ಮಾಡಿಸಿಕೊಂಡದ್ದರು ಎನ್ನಲಾಗಿದೆ.

ಅತ್ಮಹತ್ಯೆ ಮಾಡಿಕೊಂಡ ಸುದೀಪ್ ಕಳೆದ ಕೆಲವು ವರ್ಷಗಳಿಂದ ಬೆಳ್ತಂಗಡಿ ತಾಲೂಕಿನಲ್ಲಿ SRN ಗ್ರೂಪ್ ಹೆಸರಿನಲ್ಲಿ ಎಲೆಕ್ಟ್ರಾನಿಕ್ ಹಾಗೂ ಸೋಲಾರ್ ಉದ್ಯಮವನ್ನು ಮಾಡಿಕೊಂಡಿದ್ದರು.

ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಉದ್ಯಮಿಯ ತಂದೆ ದಾಮೋದರ ರೈ ನೀಡಿದ ದೂರಿನ ಮೇರೆಗೆ ಸೌಮ್ಯ ಶೆಟ್ಟಿ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version