Home ಅಪಘಾತ ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ ಹಲವರಿಗೆ ಗಾಯ

ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ ಹಲವರಿಗೆ ಗಾಯ

0

ಬೆಳ್ತಂಗಡಿ ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲಿ ಬಸ್ ಪಲ್ಟಿಯಾಗಿ 20 ಕ್ಕಿಂತಲೂ ಅಧಿಕ ಮಂದಿ) ಗಾಯಗೊಂಡ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ ಆಂಧ್ರ ಮೂಲದ

ಖಾಸಗಿ ಬಸ್ ಉಜಿರೆಯಿಂದ ಕೊಟ್ಟಿಗೆಹಾರ ಕಡೆ ಚಲಿಸುತಿದ್ದ ವೇಳೆ ಚಾರ್ಮಾಡಿ ಘಾಟ್ ರಸ್ತೆಯ ನಾಲ್ಕನೇ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ವೇಳೆ ಬಸ್ ನಲ್ಲಿದ್ದ ಇಪ್ಪತ್ತಕ್ಕಿಂತಲೂ ಅಧಿಕ ಮಂದಿ ಗಾಯಗೊಂಡಿದ್ದು, ಕೆಲವರಿಗೆ ಗಂಭೀರ ಗಾಯಗಳಾಗಿದ್ದು ಗಾಯಗಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡ ಕೆಲವರನ್ನು ಮಂಗಳೂರಿಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ

.

NO COMMENTS

LEAVE A REPLY

Please enter your comment!
Please enter your name here

Exit mobile version