Home ಅಪರಾಧ ಲೋಕ ಬೆಳ್ತಂಗಡಿ : ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ : ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

0

ಬೆಳ್ತಂಗಡಿ : ಅಪರಿಚಿತ ಸುಮಾರು 40 ರಿಂದ 45 ವರ್ಷದ ಗಂಡಸಿನ ಮೃತದೇಹ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ಇರುವ ನೀರಿನ ಡ್ಯಾಂ ನ ನೀರಿನಲ್ಲಿ ಎ.27 ರಂದು ಬೆಳಗ್ಗೆ ಪತ್ತೆಯಾಗಿದೆ.

ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತವ್ಯಕ್ತಿಯ ಎತ್ತರ 5.7 ಅಡಿ, ದಪ್ಪ ಶರೀರ, ಎಣ್ಣೆ ಕಪ್ಪು ಮೈಬಣ್ಣ, ಅಗಲ ಮುಖ, ಮುಖದಲ್ಲಿ ಕಪ್ಪು ಮಿಶ್ರಿತ ಬಿಳಿ ಗಡ್ಡ-ಮೀಸೆ, ತಲೆಯಲ್ಲಿ ಬಿಳಿ ಮಿಶ್ರಿತ ಕಪ್ಪು ಕೂದಲು ಇರುವುದು ಕಂಡು ಬಂದಿದೆ. ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸಬೇಕಾಗಿ ಪ್ರಕಟಣೆಯಲ್ಲಿ ಧರ್ಮಸ್ಥಳ ಪೊಲೀಸರು ತಿಳಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version