ಬೆಳ್ತಂಗಡಿ; ಬಂಟ್ವಾಳದಲ್ಲಿ ನಿಷೇಧಿತ ಎಂ.ಡಿ.ಎಂ.ಎ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ಇವರಿಂದ 42 ಲಕ್ಷ ಮೌಲ್ಯದ ಎಂ.ಡಿ.ಎಂ.ಎ ಯನ್ನು ಪತ್ತೆಹಚ್ಚಿದ್ದಾರೆ.
ಬಂಧಿತ ಆರೋಪಿಗಳು
ಮೊಹಮ್ಮದ್ ನಿಜಾಮುದ್ದೀನ್ (30) ಹಾಗೂ ಆತನ ಸಹೋದರ ಮೊಹಮದ್ ಶಾಹೀಂ (19) ಎಂಬವರಾಗಿದ್ದಾರೆ.
ಮೇ 2 ರಂದು ಸಂಜೆ, ಮಂಜುನಾಥ ಟಿ, ಪೊಲೀಸ್ ಉಪ ನಿರೀಕ್ಷಕರು (ಕಾ&ಸು), ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆರವರಿಗೆ ನಿಷೇದಿತ ಮಾದಕ ವಸ್ತುವಾದ ಎಂ.ಡಿ.ಎಂ.ಎ ಸಾಗಾಟದ ಬಗ್ಗೆ ಮಾಹಿತಿ ಬಂದ ಮೇರೆಗೆ, ಠಾಣಾ ಸಿಬ್ಬಂದಿಗಳೊಂದಿಗೆ ಬಂಟ್ವಾಳ ಮಂಚಿ ಗ್ರಾಮದ ಪಂಜಾಲ ಕ್ರಾಸ್ ಎಂಬಲ್ಲಿಗೆ ತೆರಳಿ, ಸದರಿ ಮಾರ್ಗವಾಗಿ ಬರುತ್ತಿದ್ದ KA-20-Z-9585 ಬೊಲೆರೋ ವಾಹನವನ್ನು ತಪಾಸಣೆಗಾಗಿ ತಡೆದು ನಿಲ್ಲಿಸಿರುತ್ತಾರೆ. ಸದ್ರಿ ವಾಹನದಲ್ಲಿ ಇಬ್ಬರು ವ್ಯಕ್ತಿಗಳಿದ್ದು, ಅವರುಗಳನ್ನು ವಿಚಾರಿಸಲಾಗಿ, ಬಂಟ್ವಾಳ ಬೊಳಂತೂರು ನಿವಾಸಿಗಳಾದ ಮೊಹಮ್ಮದ್ ನಿಜಾಮುದ್ದೀನ್ (30) ಹಾಗೂ ಆತನ ಸಹೋದರ ಮೊಹಮದ್ ಶಾಹೀಂ (19) ಎಂಬುದಾಗಿ ತಿಳಿಸಿರುತ್ತಾರೆ. ಸದ್ರಿ ಅಸಾಮಿಗಳಲ್ಲಿ ಮಾದಕವಸ್ತು ಸಾಗಾಟದ ಬಗ್ಗೆ ವಿಚಾರಿಸಿದಾಗ ಆರೋಪಿಗಳು ಬೆಂಗಳೂರಿನಲ್ಲಿ ಅಪರಿಚಿತ ನೈಜೀರಿಯಾದ ವ್ಯಕ್ತಿಯೊಬ್ಬರಿಂದ ಎಂಡಿಎಂಎ ಖರೀದಿಸಿ, ಮಾರಾಟ ಮಾಡಲು ಸಾಗಿಸುತ್ತಿರುವುದು ತಿಳಿದುಬಂದಿರುತ್ತದೆ. ಅವರುಗಳನ್ನು ಹಾಗೂ ವಾಹನವನ್ನು ತಪಾಸಣೆ ನಡೆಸಿದಾಗ ರೂ 42,30,000 /-ಮೌಲ್ಯದ 423 ಗ್ರಾಂ ಎಂ.ಡಿ.ಎಂ.ಎ ಪತ್ತೆಯಾಗಿರುತ್ತದೆ. ಮುಂದಿನ ಕಾನೂನು ಕ್ರಮಕ್ಕಾಗಿ ಸದ್ರಿ ಮಾದಕವಸ್ತುವನ್ನು ಹಾಗೂ ಅರೋಪಿಗಳ ಬಳಿಯಿದ್ದ 03 ಮೊಬೈಲ್ ಫೋನ್ ಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಬೊಲೇರೊ ವಾಹನವನ್ನು ಸ್ವಾಧೀನಪಡಿಸಲಾಗಿದ್ದು, ಸ್ವಾಧೀನಪಡಿಸಲಾದ ಸೊತ್ತುಗಳ ಒಟ್ಟು ಮೊತ್ತ ರೂ 46,25,000 /-ಗಳಾಗಿರುತ್ತದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 68/2026, ಕಲಂ: 8(C) r/w 20(b)(ii)(C) NARCOTIC DRUGS AND PSYCHOTROPIC SUBSTANCES ACT 1985 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.









