Home ಅಪಘಾತ ಬೆಳ್ತಂಗಡಿ : ಬೆಳಾಲು ಸ್ಕೂಟರ್ ಗೆ ಕ್ರೇನ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವು

ಬೆಳ್ತಂಗಡಿ : ಬೆಳಾಲು ಸ್ಕೂಟರ್ ಗೆ ಕ್ರೇನ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವು

6
0

ಬೆಳ್ತಂಗಡಿ : ಕ್ರೇನ್ ವಾಹನ ದ್ವಿಚಕ್ರ ವಾಹನದ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿದ ಘಟನೆ ಮೇ. 5 ರಂದು ಬೆಳ್ತಂಗಡಿ ತಾಲೂಕಿನ ಬೆಳಾಲು ಪೇಟೆಯಲ್ಲಿ ಸಂಭವಿಸಿದೆ.

ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಬಳಂಜ ನಿವಾಸಿ ಜಯ ಮೇಸ್ತ್ರಿ(49) ಮೃತಪಟ್ಟರಾಗಿದ್ದಾರೆ. ಇವರು ಬೆಳಾಲು ಗ್ರಾಮದ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು.

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಕುಮಾರ್ ಪಿ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here