Home ಅಪಘಾತ ಬೆಳ್ತಂಗಡಿ; ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

ಬೆಳ್ತಂಗಡಿ; ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

0

ಬೆಳ್ತಂಗಡಿ: ಗುರುವಾಯನಕೆರೆ-ಶಕ್ತಿನಗರ ವೃತ್ತ ಬಳಿ ಬೈಕ್ ಮತ್ತು ಪಿಕಾಪ್‌ ವಾಹನ ಅಪಘಾತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸವಾರ ನಾಗರಾಜ್‌ (21ವ) ರವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.

ನಾಗರಾಜ್ (21 ವ) ಇವರು ಕಾರ್ಕಳದವರಾಗಿದ್ದು, ಮೇ 6 ರಂದು ಗುರುವಾಯಕೆರೆಯಲ್ಲಿ ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕಾಗಿ ಬಂದಿದ್ದರು. ಇವರು ಚಲಾಯಿಸುತ್ತಿದ್ದ ಬೈಕ್ ಗೆ ಗುರುವಾಯನಕೆರೆ ಕಡೆಯಿಂದ ಬರುತ್ತಿದ್ದ ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ತಕ್ಷಣ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿತ್ತು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಇಂದು(ಮೇ 7) ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version